ETV Bharat / state

ಕಾರವಾರದಲ್ಲಿ ವಿನೂತನವಾಗಿ ಪತ್ರಿಕಾ ದಿನಾಚರಣೆ: ನಿರಾಶ್ರಿತರಿಗೆ ಉಚಿತ ಆರೋಗ್ಯ ಶಿಬಿರ - undefined

ಕಾರವಾರದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಕಾಲೋನಿಯೊಂದರ ನಿರಾಶ್ರಿತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರವಾರದಲ್ಲಿ ಪತ್ರಿಕಾ ದಿನಾಚರಣೆ
author img

By

Published : Jul 2, 2019, 1:08 AM IST

ಕಾರವಾರ: ಪ್ರತಿನಿತ್ಯ ಅವರಿವರು ಆಯೋಜಿಸುವ ಕಾರ್ಯಕ್ರಮಗಳನ್ನೆ ಸುದ್ದಿಮಾಡಿ ಬಿತ್ತರಿಸುತ್ತಿದ್ದ ಪತ್ರಿಕರ್ತರು, ಇಂದು ಪತ್ರಿಕಾ ದಿನಾಚರಣೆ ಅಂಗವಾಗಿ ವಿಶಿಷ್ಟ ಕಾರ್ಯಕ್ರಮವೊಂದನ್ನು ಆಯೋಜಿಸಿ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ.

ಉತ್ತರಕನ್ನಡ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತ ಸಂಘವೂ ಪ್ರತೀ ವರ್ಷ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಈ ಬಾರಿ ಕೂಡ ಮುಂದುವರಿಸಿದೆ. ಸತ್ಯಸಾಯಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕಿನ ಚಿತ್ತಾಕುಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಬರ್ಡ್ ಕಾಲೋನಿಯ ನಿರಾಶ್ರಿತರಿಗೆ ಹಾಗೂ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಿ ಪತ್ರಿಕಾ ದಿನಾಚರಣೆಯನ್ನು ಆಚರಿಸಿದೆ.

ಇನ್ನು ಕಾರ್ಯಕ್ರಮವನ್ನ ಶಾಸಕಿ ರೂಪಾಲಿ ನಾಯ್ಕ ಉದ್ಘಾಟಿಸಿ, ಗ್ರಾಮೀಣ ಭಾಗದಲ್ಲಿ ಪತ್ರಕರ್ತರು ಕಾರ್ಯಕ್ರಮವನ್ನು ಆಯೋಜಿಸಿ ಸಾಮಾನ್ಯ ನಾಗರೀಕರ ಆರೋಗ್ಯ ತಪಾಸಣೆ ನಡೆಸುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಠಾಗೋರ್ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇನ್ನು ಈ ಹಿಂದೆ ಪತ್ರಕರ್ತರ ಸಂಘವು ಶಾಲಾ ವಿದ್ಯಾರ್ಥಿಗಳಿಗೆ ಪಾದರಕ್ಷೆ ನೀಡಿತ್ತು. ಈ ಬಾರಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ನೀಡಲಾಯಿತು.

ಒಟ್ಟಿನಲ್ಲಿ ಕಾರವಾರ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿ ಬಾರಿಯೂ ಗ್ರಾಮೀಣ ಪ್ರದೇಶದ ನಾಗರಿಕರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

Intro:
ಕಾರವಾರದಲ್ಲಿ ವಿನೂತನ ಪತ್ರಿಕಾ ದಿನಾಚರಣೆ

ಕಾರವಾರ: ಪ್ರತಿನಿತ್ಯ ಅವರಿವರು ಆಯೋಜಿಸುವ ಕಾರ್ಯಕ್ರಮಗಳನ್ನೆ ಸುದ್ದಿಮಾಡಿ ಬಿತ್ತರಿಸುತ್ತಿದ್ದ ಪತ್ರಿಕರ್ತರು ಇಂದು ಪತ್ರಿಕಾ ದಿನಾಚರಣೆ ಅಂಗವಾಗಿ ವಿಶಿಷ್ಟ ಕಾರ್ಯಕ್ರಮವೊಂದನ್ನು ಆಯೋಜಿಸಿ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ.

ಹೌದು ಉತ್ತರಕನ್ನಡ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತ ಸಂಘವೂ ಪ್ರತಿ ವರ್ಷ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಈ ಬಾರಿ ಕೂಡ ಮುಂದುವರಿಸಿದೆ. ಸತ್ಯಸಾಯಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ತಾಲ್ಲೂಕಿನ ಚಿತ್ತಾಕುಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಬರ್ಡ್ ಕಾಲೋನಿಯ ನಿರಾಶ್ರಿತರಿಗೆ ಹಾಗೂ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ಶಿಬರವನ್ನು ಏರ್ಪಡಿಸಿ ಅರ್ಥಪೂರ್ಣವಾಗಿ ಪತ್ರಿಕಾ ದಿನಾಚರಣೆಯನ್ನು ಆಚರಿಸಿದೆ.

ಇನ್ನು ಕಾರ್ಯಕ್ರಮವನ್ನ ಶಾಸಕಿ ರೂಪಾಲಿ ನಾಯ್ಕ ಉದ್ಘಾಟಿಸಿ, ಗ್ರಾಮೀಣ ಭಾಗದಲ್ಲಿ ಪತ್ರಕರ್ತರು ಕಾರ್ಯಕ್ರಮವನ್ನು ಆಯೋಜಿಸಿ ಸಾಮಾನ್ಯ ನಾಗರಿಕರ ಆರೋಗ್ಯ ತಪಾಸಣೆ ನಡೆಸುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹಾವೇರಿ ಕನ್ನಡಪ್ರಭ ಹಿರಿಯ ವರದಿಗಾರ ನಾರಾಯಣ ಹೆಗಡೆ, ತರುಣ ಭಾರತ್ ಕಾರವಾರ ಜಿಲ್ಲಾ ವರದಿಗಾರ ಪಿ.ಕೆ ಚಾಪಗಾಂವಕರ್ ಮತ್ತು ಟಿವಿ9 ಕ್ಯಾಮರಾಮೆನ್ ದಿನೇಶ ಯಲ್ಲಾಪುರ ಅವರಿಗೆ ಟ್ಯಾಗೋರ್ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಲ್ಲದೆ ವೈದ್ಯರ ದಿನಾಚರಣೆ ಹಿನ್ನಲೆಯಲ್ಲಿ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವೈದ್ಯರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇನ್ನು ಈ ಹಿಂದೆ ಪತ್ರಕರ್ತರ ಸಂಘವು ಶಾಲಾ ವಿದ್ಯಾರ್ಥಿಗಳಿಗೆ ಪಾದರಕ್ಷೆ ನೀಡಿತ್ತು. ಇದನ್ನುಗಮನಿಸಿದ ಸರ್ಕಾರ ರಾಜ್ಯದ ಎಲ್ಲಾ ಶಾಲೆಗಳಿಗೂ ಪಾದರಕ್ಷೆ ನೀಡುವ ಕಾರ್ಯಕ್ರಮ ಅನುಷ್ಠಾನ ಗೊಳಿಸಿತ್ತು. ಹೀಗಾಗಿ ಈ ಬಾರಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಕೂಡನೀಡಲಾಯಿತು.

ಒಟ್ಟಿನಲ್ಲಿ ಕಾರವಾರ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿ ಬಾರಿಯೂ ಗ್ರಾಮೀಣ ಪ್ರದೇಶದ ನಾಗರಿಕರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
Body:ಕConclusion:ಕ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.