ಕಾರವಾರ: ಕುಮಟಾದ ಮನೆಯೊಂದರಲ್ಲಿ ಕಳ್ಳತನ ನಡೆಸಿದ್ದ ಇಬ್ಬರು ಅಂತರಾಜ್ಯ ಆರೋಪಿಗಳನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ.
ಗೋಪಿ ಮತ್ತು ಡೇವಿಡ್ ಫ್ರಾನ್ಸಿಸ್ ಎಂಬುವವರು ಬಂಧಿತ ಆರೋಪಿಗಳು. ಜನವರಿ 1ರಂದು ಕುಮಟಾದ ಗಜಾನನ ಗೌರಯ್ಯ ಎಂಬುವವರ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಆರೋಪಿಗಳಿಗೆ ಬಲೆ ಬೀಸಿದ್ದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಒಟ್ಟು 1,19,875 ರೂ. ಮೌಲ್ಯದ 289 ಗ್ರಾಂ. ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ.