ಕಾರವಾರ: ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಪೇದೆ ಹಾಗೂ ಆತನ ಸಹೋದರನ ಮೇಲೆ ನಾಲ್ವರು ಹಲ್ಲೆ ಮಾಡಿದ ಘಟನೆ ನಗರದ ಬೈತಖೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 22ರಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ ರವಿರಾಜ ಮಡಿವಾಳ (35) ಶ್ವಾನದಳ ಸಿಬ್ಬಂದಿಯಾಗಿದ್ದು, ಇವರು ತಮ್ಮ ಚಿಕ್ಕಪ್ಪನ ಮಗ ಶಿವನಾಥ ಮಡಿವಾಳ ಜೊತೆ ಬೈತಖೋಲ್ನ ಅಂಗಡಿಯೊಂದಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿದ್ದ ನಾಲ್ವರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಕಲ್ಲಿನಿಂದ ಹಲ್ಲೆ ಮಾಡಿ, ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ ಎಂದು ರವಿರಾಜ್ ದೂರು ದಾಖಲಿಸಿದ್ದಾರೆ.
ಅಲ್ಲದೆ ಜಗಳದಲ್ಲಿ ಗಾಯಗೊಂಡ ರವಿರಾಜ ಹಾಗೂ ಶಿವಾನಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ನಾಲ್ವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.