ಭಟ್ಕಳ(ಉತ್ತರ ಕನ್ನಡ): ತಾಲೂಕಿನ ಎರಡು ಕಡೆ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್ ನೇತೃತ್ವದ ಎರಡು ಪ್ರತ್ಯೇಕ ತಂಡ ದಾಳಿ ನಡೆಸಿ ಶೋಧಕಾರ್ಯ ಕೈಗೊಂಡಿದೆ. ಸಹಾಯಕ ಆಯುಕ್ತರ ನೇತೃತ್ವದ ಒಂದು ತಂಡ ಉಮರ್ ಸ್ಟ್ರಿಟ್ ಮುಸಾನಗರದಲ್ಲಿರುವ ಪಿಎಫ್ಐ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಂ ಬೆಹಟ್ಟಿ ಮನೆಯಲ್ಲಿ ಶೋಧಕಾರ್ಯ ನಡೆಸಿದೆ.
ತಹಶಿಲ್ದಾರ್ ಹಾಗೂ ಡಿವೈಎಸ್ಪಿ ನೇತೃತ್ವದ ಇನ್ನೊಂದು ತಂಡ ಜಾಮಿಯಾಬಾದ್ ಕ್ರಾಸ್ ಅಬೂಬಕರ್ ಮಸೀದಿ ಸಮೀಪದ ಮೊಹಮ್ಮದ್ ಸಲ್ಮಾನ್ ಮನೆಯ ಮೇಲೆ ದಾಳಿ ನಡೆಸಿ ಶೋಧಕಾರ್ಯ ಕೈಗೊಂಡಿದೆ. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಮಮತಾ ದೇವಿ, ತಹಶೀಲ್ದಾರ್ ಸುಮಂತ ಬಿ, ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ, ಗ್ರಾಮೀಣ ಠಾಣಾ ಸಿಪಿಐ ಮಹಾಬಲೇಶ್ವರ ನಾಯ್ಕ ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ : ಪಿಎಫ್ಐ ನಿಷೇಧ: ಮಂಗಳೂರು ಜಿಲ್ಲಾ ಕಚೇರಿಗೆ ಬೀಗಮುದ್ರೆ ಹಾಕಿದ ಪೊಲೀಸರು