ETV Bharat / state

ವೇಶ್ಯಾವಾಟಿಕೆ ಮನೆ ಮೇಲೆ ದಾಳಿ: ನಾಲ್ವರು ಆರೋಪಿಗಳ ಬಂಧನ

ಶಿರಸಿಯಲ್ಲಿ ಅಕ್ರಮವಾಗಿ ಮನೆಯಲ್ಲೇ ವೇಶ್ಯವಾಟಿಕೆ ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ನಾಲ್ವರನ್ನು ಬಂಧಿಸಿ, ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ.

author img

By

Published : Mar 10, 2020, 1:56 AM IST

arrest of four accused
ವೇಶ್ಯಾವಾಟಿಕೆ ಮನೆ ಮೇಲೆ ದಾಳಿ

ಶಿರಸಿ: ಮನೆಯೊಂದರಲ್ಲಿ ಅಕ್ರಮ ವೇಶ್ಯವಾಟಿಕೆ ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ದಾಳಿ ವೇಳೆ ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮರಾಠಿಕೊಪ್ಪದಲ್ಲಿ ನಡೆದಿದೆ.

ಶಿರಸಿಯ ಮರಾಠಿಕೊಪ್ಪದ ಸಾವಿತ್ರಿ ಶಂಕರ ಭಟ್ (56), ಇಲ್ಲಿನ ಅಗಸೆಬಾಗಿಲಿನ ರಾಮಚಂದ್ರ ಗಜಾನನ ನಾಯ್ಕ (59) , ಹೊನ್ನಾವರದ ಲಕ್ಷ್ಮೀಕಾಂತ ನಾಯ್ಕ (22) ಹಾಗೂ ಹುಬ್ಬಳ್ಳಿಯ ಆನಂದ ರೋಣಿಮಠ (57 ) ಬಂಧಿತ ಆರೋಪಿಗಳಾಗಿದ್ದಾರೆ.

ಇವರಿಂದ 2,850 ರೂ. ನಗದು ಮತ್ತು 4 ಮೊಬೈಲ್​​ಗಳನ್ನು ಜಪ್ತಿ ಪಡಿಸಿಕೊಂಡಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಾವಿತ್ರಿ ಭಟ್ ಹಾಗೂ ರಾಮಚಂದ್ರ ನಾಯ್ಕ ಹಣಗಳಿಸುವ ಉದ್ದೇಶದಿಂದ ಒತ್ತಾಯ ಪೂರ್ವಕವಾಗಿ ಇಬ್ಬರು ಮಹಿಳೆಯರನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದರು. ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.