ETV Bharat / state

ಶಾಲಾಭಿವೃದ್ಧಿ ಸಮಿತಿ ಸದಸ್ಯನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ - ವಿದ್ಯಾರ್ಥಿನಿ ಮೇಲೆ ಬಲಾತ್ಕಾರಕ್ಕೆ ಯತ್ನ

ಜಿಲ್ಲೆಯ ಖಾಸಗಿ ಶಾಲೆಯೊಂದರ ಶಾಲಾಭಿವೃದ್ಧಿ ಸಮಿತಿ ಸದಸ್ಯನೊಬ್ಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಲಾತ್ಕಾರ
rape
author img

By

Published : Jan 25, 2020, 12:49 PM IST

ಶಿರಸಿ: ಶಾಲಾಭಿವೃದ್ಧಿ ಸಮಿತಿಯ ಸದಸ್ಯನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶಿರಸಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶಾಲಾಭಿವೃದ್ಧಿ ಸದಸ್ಯ ನಾರಾಯಣ ಬಾಳು ನೆಸರಕರ ಎಂಬಾತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವನಾಗಿದ್ದಾನೆ ಎಂದು ಆರೋಪಿಸಲಾಗಿದೆ. ಜ‌‌. 19ರಂದು ವಿದ್ಯಾರ್ಥಿನಿಯ ತಂದೆ-ತಾಯಿ ಹೊಲದ ಕೆಲಸಕ್ಕೆ ಹೋದ ಸಂದರ್ಭ ಮನೆಗೆ ಆಗಮಿಸಿ ಮನೆಯಲ್ಲಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ವಿದ್ಯಾರ್ಥಿನಿ ಜೋರಾಗಿ ಕೂಗಿಕೊಂಡಿದ್ದಾಳೆ. ಆಗ ಅವಳ ಬಾಯಿಯನ್ನು ಮುಚ್ಚಿ ತನ್ನ ಮೊಬೈಲ್​ನಲ್ಲಿ ಫೋಟೋ ತೆಗೆದುಕೊಂಡು ನೀನು ಯಾರಿಗಾದರೂ ಈ ವಿಷಯ ತಿಳಿಸಿದರೆ ಈ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ನಂತರ ಶಾಲೆಯ ಶಿಕ್ಷಕರೋರ್ವರಿಗೆ ಫೋನ್ ಮಾಡಿ ನಿಮ್ಮ ಶಾಲೆಯ ವಿದ್ಯಾರ್ಥಿನಿಯೋರ್ವಳ ಬಗ್ಗೆ ಏನೋ ಹೇಳುವುದಿದೆ ಎನ್ನುತ್ತ ಫೋನ್ ಕಟ್ ಮಾಡಿದ್ದಾನಂತೆ. ನಂತರ ಜನವರಿ 21ರಂದು ನಾರಾಯಣ ಮತ್ತೆ ಶಾಲೆಯ ಬಳಿ ಬಂದು ಶಿಕ್ಷಕರ ಹತ್ತಿರ ಏನೋ ಮಾತನಾಡಿ ಹೋಗಿದ್ದಾನೆ ಎಂದು ಹೇಳಲಾಗಿದ್ದು, ಇದನ್ನೆಲ್ಲ ಗಮನಿಸಿದ ವಿದ್ಯಾರ್ಥಿನಿ ಗಾಬರಿಗೊಂಡು ಮನೆಗೆ ಹೋಗಿ ಸುಮ್ಮನಾಗಿದ್ದಳಂತೆ.

ಎರಡ್ಮೂರು ದಿನಗಳಿಂದ ಮಗಳ ನಡವಳಿಕೆಯಲ್ಲಾದ ಬದಲಾವಣೆ ಗಮನಿಸಿದ ತಾಯಿ ಮಗಳನ್ನು ಸೂಕ್ಷ್ಮವಾಗಿ ವಿಚಾರಿಸಿದಾಗ ನಡೆದ ಘಟನೆಯ ಕುರಿತು ಹೇಳಿಕೊಂಡಿದ್ದಾಳೆ. ನಂತರ ವಿದ್ಯಾರ್ಥಿನಿಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಇತ್ತ ನಡೆದ ಘಟನೆ ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿ ನಾರಾಯಣ ಬಾಳು ನೆಸರಕರ ಎರಡು ದಿನಗಳಿಂದ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Intro:ಶಿರಸಿ : ಶಾಲಾಭಿವೃದ್ಧಿ ಸಮಿತಿಯ ಸದಸ್ಯನೊಬ್ಬ ವಿದ್ಯಾರ್ಥಿನಿಯೊಬ್ಬಳ ಬಲಾತ್ಕಾರಕ್ಕೆ ಯತ್ನಿನಿಸಿದ ಘಟನೆಯೊಂದು ಮುಂಡಗೋಡ ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ಜರುಗಿದೆ.

ಶಾಲಾಭಿವೃದ್ಧಿ ಸದಸ್ಯ ನಾರಾಯಣ ಬಾಳು ನೆಸರಕರ ಎಂಬಾತನೆ ವಿದ್ಯಾರ್ಥಿನಿಯ ಬಲಾತ್ಕಾರಕ್ಕೆ ಯತ್ನಿಸಿದವನಾಗಿದ್ದಾನೆ ಎಂದು ಆರೋಪಿಸಲಾಗಿದೆ. ಕಳೆದ ಜ‌‌.೧೯ ರಂದು ವಿದ್ಯಾರ್ಥಿನಿಯ ತಂದೆ ತಾಯಿ ಹೊಲದ ಕೆಲಸಕ್ಕೆ ಹೋದ ವೇಳೆಯಲ್ಲಿ ಮನೆಗೆ ಆಗಮಿಸಿ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ನಾರಾಯಣ ನೆಸರಕರ ಗಟ್ಟಿಯಾಗಿ ಹಿಡಿದುಕೊಂಡು ಬಲಾತ್ಕಾರಕ್ಕೆ ಯತ್ನಿಸುತ್ತಿರುವಾಗ ವಿದ್ಯಾರ್ಥಿನಿ ಗಟ್ಟಿಯಾಗಿ ಕೂಗಿಕೊಳ್ಳಲು ಯತ್ನಿಸಿದಾಗ ಭಯಬೀತನಾದ ನಾರಾಯಣ ಅವಳ ಬಾಯಿಯನ್ನು ಹಿಡಿದುಕೊಂಡು ತನ್ನ ಮೋಬೈಲ್‍ದಿಂದ ಪೋಟೋ ತೆಗೆದುಕೊಂಡು ನೀನು ಯಾರಿಗಾದರೂ ಈ ಘಟನೆಯ ವಿಷಯ ತಿಳಿಸಿದರೆ ಈ ಪೋಟೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ನಂತರ ಶಾಲೆಯ ಶಿಕ್ಷಕನೊರ್ವರಿಗೆ ಪೋನ್ ಮಾಡಿ ನಿಮ್ಮ ಶಾಲೆಯ ವಿದ್ಯಾರ್ಥಿನಿಯೊರ್ವಳ ಬಗ್ಗೆ ಏನೋ ಹೇಳುವುದಿದೆ ಎನ್ನುತ್ತ ಪೋನ್ ಕಟ್ ಮಾಡಿದ್ದಾನೆ.
                                                                                                                                                                                                      Body:ತದ ನಂತರ ಜನೇವರಿ 21 ರಂದು ನಾರಾಯಣ ಮತ್ತೆ ಶಾಲೆಯ ಬಳಿ ಬಂದು ಶಿಕ್ಷಕರ ಹತ್ತಿರ ಏನೋ ಮಾತನಾಡಿ ಹೋಗಿದ್ದಾನೆ ಎಂದು ಹೇಳಲಾಗಿದ್ದು,
ಇದನ್ನೆಲ್ಲ ಗಮನಿಸಿದ ವಿದ್ಯಾರ್ಥಿನಿ ಗಾಬರಿಗೊಂಡು ಮನೆಗೆ ಹೋಗಿ, ಸುಮ್ಮನೆ ಕುಳಿತ್ತಿದ್ದಾಳೆ. ಎರಡ್ಮೂರು ದಿನಗಳಿಂದ ಮಗಳ ನಡವಳಿಕೆಯಲ್ಲಾದ ಬದಲಾವಣೆಯನ್ನು ಗಮನಿಸಿದ ತಾಯಿ ಮಗಳನ್ನು ಸೂಕ್ಷ್ಮವಾಗಿ ವಿಚಾರಿಸಿದಾಗ ನಡೆದ ಘಟನೆಯ ಕುರಿತು ಹೇಳಿಕೊಂಡಿದ್ದಾಳೆ. ನಂತರ ವಿದ್ಯಾರ್ಥಿನಿಯ ತಾಯಿ ಸೋನುಬಾಯಿ ಮುಂಡಗೋಡ ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾಳೆ.

ಇತ್ತ ನಡೆದ ಘಟನೆ ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿತ ನಾರಾಯಣ ಬಾಳು ನೆಸರಕರ ಎರಡು ದಿನಗಳಿಂದಲೇ ನಾಪತ್ತೆಯಾಗಿದ್ದಾನೆ ಎಂದು ಫೋಲಿಸರು ತಿಳಿಸಿದ್ದಾರೆ.
..............
ಸಂದೇಶ ಭಟ್ ಶಿರಸಿ‌                            Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.