ಕಾರವಾರ: ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ಹಾನಿಗೊಳಗಾದ ಉತ್ತರಕನ್ನಡ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಅವರು ಪರಿಶೀಲನೆ ನಡೆಸುವರು.
ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದು 10-45 ಕ್ಕೆ ಯಲ್ಲಾಪುರ ಕಡೆ ರಸ್ತೆ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ಬಳಿಕ ಪ್ರವಾಹದಿಂದ ಹಾನಿಗೊಳಗಾದ ಯಲ್ಲಾಪುರ, ಅಂಕೋಲಾ, ಕಾರವಾರ ಭಾಗದಲ್ಲಿ ಪರಿಶೀಲನೆ ನಡೆಸಿ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನದ ಬಳಿಕ ಅಂಕೋಲಾದಲ್ಲಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರವಾಹ ಪರಿಹಾರ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ವಿಶೇಷ ಕರ್ತವ್ಯಧಿಕಾರಿ ಬಿ.ಪಿ. ಚನ್ನಬಸವೇಶ ತಿಳಿಸಿದ್ದಾರೆ.
ಇದನ್ನೂ ಓದಿ: ಅನ್ಯಕೋಮಿನ ಯುವತಿ ಜೊತೆ ಪ್ರೀತಿ-ಪ್ರೇಮ-ಪ್ರಣಯ: ತೋಟದಲ್ಲಿ ಬಿತ್ತು ಯುವಕನ ಹೆಣ