ETV Bharat / state

ಮಹಿಳೆ ಹೊಟ್ಟೆಯಿಂದ 7 ಕೆಜಿ ತೂಕದ ಗಡ್ಡೆ ಹೊರ ತೆಗೆದ ಭಟ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರು.. - 7 ಕೆಜಿ ತೂಕದ ಗಡ್ಡೆ ಹೊರ ತೆಗೆದ ವೈದ್ಯರು

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಗೆ ಅಂದು ತಾತ್ಕಾಲಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದರು. ಬುಧವಾರ ಶಸ್ತ್ರ ಚಿಕಿತ್ಸೆ ನಡೆಸಿ ಮಹಿಳೆಯ ಹೊಟ್ಟೆಯಲ್ಲಿದ್ದ 7 ಕೆಜಿ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ.

7 kg Tumor in woman's stomach
7 ಕೆಜಿ ತೂಕದ ಗಡ್ಡೆ ಹೊರ ತೆಗೆದ ಭಟ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರು
author img

By

Published : Jun 10, 2020, 9:42 PM IST

ಭಟ್ಕಳ : ಲಾಕ್​ಡೌನ್ ನಂತರ ಭಟ್ಕಳ ಸರ್ಕಾರಿ ಆಸ್ಪತ್ರೆ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು 7 ಕೆಜಿ ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹೊರ ತೆಗೆಯಲಾಗಿದೆ.

ತಾಲೂಕಿನ ಆಸರಕೇರಿ ನಿವಾಸಿ ಮಹಿಳೆಯೊಬ್ಬರು ಕಳೆದ 7 ದಿನಗಳ ಹಿಂದೆ ಹೊಟ್ಟೆನೋವು ಮತ್ತು ತೀವ್ರ ರಕ್ತಸ್ರಾವದಿಂದ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಪರೀಕ್ಷಿಸಿದ ವೈದ್ಯ ಡಾ.ಶಾಮ್ಸನೂರ್ ಹೊಟ್ಟೆಯಲ್ಲಿ ಗಡ್ಡೆಯಾಗಿರುವುದನ್ನು ಪತ್ತೆ ಹಚ್ಚಿದ್ದರು.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಗೆ ಅಂದು ತಾತ್ಕಾಲಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದರು. ಬುಧವಾರ ಶಸ್ತ್ರ ಚಿಕಿತ್ಸೆ ನಡೆಸಿ ಮಹಿಳೆಯ ಹೊಟ್ಟೆಯಲ್ಲಿದ್ದ 7 ಕೆಜಿ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ. ಚಿಕಿತ್ಸೆಯ ಬಳಿಕ ಮಹಿಳೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆಡಳಿತ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್ ಅರವಳಿಕೆ ನೀಡಿ ಆಪರೇಷನ್ ಮಾಡಲು ಸಹಕರಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.