ಭಟ್ಕಳ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭಟ್ಕಳ ಮೂಲದ ವ್ಯಕ್ತಿಯೋರ್ವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ತಾಲೂಕಿನ 62 ವರ್ಷದ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು.
ಈ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.