ETV Bharat / state

ಬಾಲಕಿ ಪುಸಲಾಯಿಸಿ ಗರ್ಭಿಣಿಯಾಗಿಸಿದ ಭೂಪ: ಆರೋಪಿ ನಾಪತ್ತೆ - bhatkal rape case

9ನೇ ತರಗತಿ ಓದುತ್ತಿದ್ದ ಬಾಲಕಿ ಶಾಲೆಗೆ ಹೋಗುವ ಸಮಯದಲ್ಲಿ ಚಿತ್ತಾಪುರದಲ್ಲಿ ಇರುವ ತನ್ನ ಅಜ್ಜಿ ಮನೆಗೆ ಹೋಗಿ ಬಂದು ಮಾಡುತ್ತಿದ್ದವಳು. ಆಗ ಅಲ್ಲಿ ಶಿರಿಸಿಯ ರವಿ ಪಟಗಾರ ಎಂಬ ಆರೋಪಿತನು 14 ವರ್ಷದ ಬಾಲಕಿಯನ್ನು ಪುಸಲಾಯಿಸಿ ಅವಳೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ ಎಂದು ದೂರಲಾಗಿದೆ.

bhatkal-minor-girl-pregnant-case
ಅಪ್ರಾಪ್ತ ಬಾಲಕಿ ಅತ್ಯಾಚಾರ
author img

By

Published : Feb 18, 2021, 5:02 PM IST

ಭಟ್ಕಳ : ಬಾಲಕಿಯೊಬ್ಬಳನ್ನು ಪುಸಲಾಯಿಸಿ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ ಪ್ರಕರಣ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

9ನೇ ತರಗತಿ ಓದುತ್ತಿದ್ದ ಬಾಲಕಿ ಶಾಲೆಗೆ ಹೋಗುವ ಸಮಯದಲ್ಲಿ ಚಿತ್ತಾಪುರದಲ್ಲಿ ಇರುವ ತನ್ನ ಅಜ್ಜಿ ಮನೆಗೆ ಹೋಗಿ ಬಂದು ಮಾಡುತ್ತಿದ್ದವಳು. ಆಗ ಅಲ್ಲಿ ಶಿರಿಸಿಯ ರವಿ ಪಟಗಾರ ಎಂಬ ಆರೋಪಿತನು 14 ವರ್ಷದ ಬಾಲಕಿಯನ್ನು ಪುಸಲಾಯಿಸಿ ಅವಳೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಪ್ರಕರಣ ಬೆಳಕಿಗೆ ಬಂದ ನಂತರ ಆರೋಪಿ ನಾಪತ್ತೆಯಾಗಿದ್ದು, ಬಾಲಕಿಯ ತಾಯಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಬಾಲಕಿ ಹೊಟ್ಟೆ ನೋವು ಎಂದು ಭಟ್ಕಳ ಸರಕಾರಿ ಆಸ್ಪತ್ರೆಗೆ ಬಂದಿದ್ದಳು. ಈ ಸಂದರ್ಭದಲ್ಲಿ ವೈದ್ಯರು ಪರಿಕ್ಷೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಮತ್ತು ಮಹಿಳಾ ಸಾಂತ್ವನ ಕೇಂದ್ರದ ಸದಸ್ಯರು ಬಾಲಕಿಯ ವಿಚಾರಣೆ ಮಾಡಿದಾಗ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ.

ಸದ್ಯ ಮಕ್ಕಳ ಲೈಂಗಿಕ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಆರೋಪಿಗೆ ಬಲೆ ಬೀಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.