ETV Bharat / state

ಭಟ್ಕಳ ನಾಲ್ವರ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸ್​​ ವಶಕ್ಕೆ, ಮತ್ತೋರ್ವ ಪರಾರಿ - ನಾಲ್ವರ ಹತ್ಯೆ ಪ್ರಕರಣ

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ- ಇಬ್ಬರು ಆರೋಪಿಗಳು ಪೊಲೀಸ್​​ ವಶಕ್ಕೆ- ಮತ್ತೋರ್ವ ಪರಾರಿ.

Bhatkal Murder case
ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ
author img

By

Published : Feb 25, 2023, 11:43 AM IST

Updated : Feb 25, 2023, 12:05 PM IST

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ ಜಯಕುಮಾರ್ ಮಾಹಿತಿ ನೀಡಿರುವುದು..

ಭಟ್ಕಳ: ತಾಲೂಕಿನ ಹಾಡವಳ್ಳಿಯಲ್ಲಿ ಆಸ್ತಿ ವಿಚಾರಕ್ಕಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದಕ್ಕೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾರೆ. ವಿಚಾರಣೆಗಾಗಿ ವಶಪಡಿಸಿಕೊಂಡ ಆರೋಪಿಗಳನ್ನು ಶ್ರೀಧರ್ ಭಟ್ ಹಾಗೂ ವಿದ್ಯಾ ಭಟ್ ಎಂದು ತಿಳಿದು ಬಂದಿದೆ. ಆರೋಪಿ ವಿನಯ ಭಟ್ ಪರಾರಿಯಾಗಿದ್ದಾನೆ.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಸಾವಿನ ನಂತರ ಅವರ ಪತ್ನಿ ವಿದ್ಯಾ ಭಟ್ ಕುಟುಂಬದವರು ಆಸ್ತಿಯಲ್ಲಿ ಪಾಲು ಕೇಳಿ ಜಗಳ ಮಾಡಿದ್ದರು. ಮಾತುಕತೆ ನಂತರ ಕೊಲೆಯಾದ ಶಂಭು ಭಟ್ಟರು ಸೊಸೆ ವಿದ್ಯಾಳಿಗೆ ಆಸ್ತಿಯಲ್ಲಿ ಪಾಲು ನೀಡಿದ್ದರು. ಆದರೆ ಶುಕ್ರವಾರ ಶಂಭು ಭಟ್ ಮನೆಯ ಪಕ್ಕದಲ್ಲಿ ಅಂದರೆ ವಿದ್ಯಾ ಭಟ್ ಅವರಿಗೆ ಪಾಲಿಗೆ ಬರುವ ಜಾಗದಲ್ಲಿದ್ದ ಕೊಟ್ಟಿಗೆಯನ್ನು ತೆಗೆದು ಅದರ ಕಲ್ಲುಗಳನ್ನು ಬೇರೆ ಕಡೆಗೆ ಒಯ್ಯಲಾಗಿತ್ತು. ಈ ವಿಚಾರವಾಗಿ ಜಗಳ ನಡೆದು ನಾಲ್ವರ ಹತ್ಯೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೃತ ಶಂಭು ಭಟ್ ಮಗಳಾದ ಜಯಶ್ರೀ ಪ್ರಕಾಶ ಅಡಿಗ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ವಿವರ: ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಮನೆಯೊಳಗೆ ಮಲಗಿದ್ದ ಮಗು ಹಾಗೂ ಪಕ್ಕದ ಮನೆಯಲ್ಲಿದ್ದ ಇನ್ನೊಂದು ಮಗು ಕೊಲೆಗಡುಕರಿಂದ ಪಾರಾಗಿವೆ. ಶಂಭು ಹೆಗಡೆ (65), ಅವರ ಪತ್ನಿ ಮಾದೇವಿ ಹೆಗಡೆ (45), ಅವರ ಮಗ ರಾಜೀವ್ ಹೆಗಡೆ (34) ಹಾಗೂ ಸೊಸೆ ಕುಸುಮಾ ಭಟ್(30) ಕೊಲೆಯಾದವರು.

Bhatkal Murder case
ಹತ್ಯೆಯಾದವರು..

ಕುಟುಂಬದ ಸಂಬಂಧಿ ವಿನಯ ಶ್ರೀಧರ ಭಟ್ ಕತ್ತಿಯಿಂದ ಹಲ್ಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಹಾಡವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕಳೆದ ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಸಾವಿನ ನಂತರ ಅವರ ಪತ್ನಿ ವಿದ್ಯಾ ಭಟ್ ಕುಟುಂಬದ ಆಸ್ತಿಯಲ್ಲಿ ಪಾಲು ಕೇಳಿ ಜಗಳ ಮಾಡಿಕೊಂಡಿದ್ದರು. ಮಾತುಕತೆ ನಂತರ ಶಂಭು ಭಟ್ಟರು ಸೊಸೆ ವಿದ್ಯಾಳಿಗೆ ಆಸ್ತಿಯಲ್ಲಿ ಪಾಲು ನೀಡಿದ್ದರು. ಆದರೆ ಇದೇ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ವಿದ್ಯಾ ಸಹೋದರ ಹಲ್ಯಾಣಿ ನಿವಾಸಿ ವಿನಯ ಶ್ರೀಧರ ಭಟ್ ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕೊಲೆ ಸಂಬಂಧ ವಿದ್ಯಾ ಭಟ್ ಹಾಗೂ ಅವರ ತಂದೆ ಶ್ರೀಧರ ಭಟ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿಯಾಗಿರುವ ವಿದ್ಯಾಳ ಸಹೋದರ ವಿನಯ ಭಟ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಕೊಲೆಗಡುಕನಿಂದ ಪಾರಾದ ಇಬ್ಬರು ಮಕ್ಕಳು

Last Updated : Feb 25, 2023, 12:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.