ETV Bharat / state

ಭಟ್ಕಳ: ಇಸ್ರೇಲ್​ನಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಕ್ಕ ಕ್ಷಣ!

ಇಸ್ರೇಲ್​ನಲ್ಲಿ ನೆಲೆಸಿರುವ ಭಟ್ಕಳದ ಜನರು ತಮ್ಮ ಕುಟುಂಬಸ್ಥರೊಂದಿಗೆ ವಿಡಿಯೋ ಕರೆ ಮಾಡಿ ಮಾತುಕತೆ ನಡೆಸಿದರು.

ಕುಟುಂಬಸ್ಥರೊಂದಿಗೆ ವಿಡಿಯೋ ಕಾಲ್ ನಡೆಸಿದ ಇಸ್ರೇಲ್​ನಲ್ಲಿ ನೆಲೆಸಿರುವ ಭಟ್ಕಳದ ಜನ

author img

By ETV Bharat Karnataka Team

Published : Oct 9, 2023, 10:15 PM IST

Updated : Oct 9, 2023, 11:04 PM IST

ವಿಡಿಯೋ ಕರೆ ಮೂಲಕ ಮಾತುಕತೆ

ಭಟ್ಕಳ : ಪ್ಯಾಲೆಸ್ಟೀನ್‌ನ ಹಮಾಸ್ ಉಗ್ರರು ಇಸ್ರೇಲ್ ಮೇಲೆ ರಾಕೆಟ್ ಹಾಗೂ ಕ್ಷಿಪಣಿಗಳ ಮಳೆಗೈದ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದು ಸದ್ಯ ಭಾರತೀಯರ ರಕ್ಷಣೆಗೆ ಭಾರತೀಯ ರಾಯಭಾರಿ ಕಚೇರಿ ಮುಂದಾಗಿದೆ. ಇಸ್ರೇಲ್​ನಲ್ಲಿ ನೆಲೆಸಿ, ರಕ್ಷಣೆಯಾಗಿರುವ ಭಟ್ಕಳದ 40ಕ್ಕೂ ಅಧಿಕ ಜನರ ಹೆಸರುಗಳನ್ನು ಗುರುತಿಸಲಾಗಿದ್ದು, ಎಲ್ಲರೂ ತಮ್ಮ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದ್ದಾರೆ.

ಭಟ್ಕಳದ 40ಕ್ಕೂ ಅಧಿಕ ಜನರ ರಕ್ಷಣೆ: ಉದ್ಯೋಗದ ನಿಮಿತ್ತ ಇಸ್ರೇಲ್​ನಲ್ಲಿ ನೆಲೆಸಿರುವ ಭಟ್ಕಳದ 40ಕ್ಕೂ ಅಧಿಕ ಜನರು ಸದ್ಯ ಭಾರತೀಯ ರಾಯಭಾರಿ ಕಚೇರಿಯಿಂದ ಸಂಪರ್ಕಕ್ಕೆ ಸಿಕ್ಕಿದ್ದು, ಎಲ್ಲರೂ ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಹೀಗಾಗಿ ಮನೆ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ, ಯುದ್ದದ ಪರಿಸ್ಥಿತಿ ಮುಂದೇನಾಗಲಿದೆ ಎಂಬ ಭಯ ಕುಟುಂಬಸ್ಥರಲ್ಲಿ ಮನೆಮಾಡಿದೆ.

ವಿಡಿಯೋ ಕರೆ ಮೂಲಕ ಮಾತುಕತೆ
ವಿಡಿಯೋ ಕರೆ ಮೂಲಕ ಮಾತುಕತೆ

ಮುಂಡಳ್ಳಿ ಭಾಗದ 12 ಮಂದಿ ಹಾಗೂ ಮುರುಡೇಶ್ವರ ಬಸ್ತಿ ಚರ್ಚ್​ ಕ್ರಾಸ್​ ಬಳಿ 29 ಮಂದಿ ಇಸ್ರೇಲ್‌ನಲ್ಲಿ ನೆಲೆಸಿರುವುದು ದೃಢಪಟ್ಟಿದೆ. ಮುರುಡೇಶ್ವರದ ಚರ್ಚ್​ ಕ್ರಾಸ್ ಸಮೀಪದ ನಿವಾಸಿ ಇಸ್ರೇಲ್‌ನಲ್ಲಿ ನೆಲೆಸಿರುವ ಸುನೀಲ್​ ಎಫ್​. ಗೋಮ್ಸ ಮತ್ತು ಡಾಲ್ಪಿ ಗೋಮ್ಸ ನಿವಾಸಕ್ಕೆ ತೆರಳಿದ್ದಾರೆ. ಈ ವೇಳೆ ಇವರ ತಾಯಿ ಹೇಲಿನ್ ಗೋಮ್ಸ ಹಾಗೂ ಸಹೋದರಿ ಇಬ್ಬರೊಂದಿಗೆ ವಿಡಿಯೋ ಕರೆ ಮೂಲಕ ಸಂಪರ್ಕಿಸಿ ಸುರಕ್ಷತೆಯ ಬಗ್ಗೆ ವಿಚಾರಿಸಿದರು.

  • ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು… pic.twitter.com/CjOdA1moJI

    — CM of Karnataka (@CMofKarnataka) October 9, 2023 " class="align-text-top noRightClick twitterSection" data=" ">

ಘಟನೆ ನಡೆದ ನಡೆದ ಸಮೀಪದಲ್ಲಿಯೇ ನಾವು ಕೆಲಸಕ್ಕಾಗಿ ನೆಲೆಸಿದ್ದ ಪ್ರದೇಶವಿದೆ. ಯಾವ ಸಂದರ್ಭದಲ್ಲಿ ಪರಿಸ್ಥಿತಿ ಏನಾಗಲಿದೆ ಎಂಬ ಭಯ ನಮ್ಮಲ್ಲಿದೆ. ಆದರೆ ಭಾರತೀಯ ರಾಯಭಾರಿ ಕಚೇರಿಯಿಂದ ಭಾರತೀಯರನ್ನು ಸಂಪರ್ಕಿಸುವ ಕಾರ್ಯಾರಂಭವಾಗಿದೆ ಎಂಬ ಮಾಹಿತಿಯ ಮೇಲೆ ನಾವಿಬ್ಬರೂ ಸಹ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸಿ ನಮ್ಮ ಸುರಕ್ಷತೆಯ ಬಗ್ಗೆ ಮಾಹಿತಿ ಪಡೆದುಕೊಂಡೆವು. ಅನಾವಶ್ಯಕವಾಗಿ ಯಾರೂ ಸಹ ಓಡಾಟ ಮಾಡಬಾರದು ಎಂಬ ಕಠಿಣ ಆದೇಶವಿದ್ದು, ಅವಶ್ಯಕತೆಯಿದ್ದಲ್ಲಿ ಮಾತ್ರ ಓಡಾಡಲು ಅನುಮತಿ ನೀಡಿದ್ದಾರೆ.

ಕೆಲವೊಂದು ಪ್ರದೇಶದಲ್ಲಿ ಅಂಗಡಿಗಳನ್ನು ತೆರೆದಿಡಲಾಗಿದ್ದು, ಆಹಾರ ಹಾಗೂ ಇನ್ನಿತರ ವಸ್ತುಗಳ ಖರೀದಿಗೆ ತೆರಳಬಹುದು. ಸಮಸ್ಯೆಯಿದ್ದಲ್ಲಿ ರಾಯಭಾರಿ ಕಚೇರಿಗೆ ಮಾಹಿತಿ ನೀಡಿದರೆ ನಿಮ್ಮನ್ನು ಸಂಪರ್ಕಿಸಲಿದ್ದೇವೆ ಎಂದಿದ್ದಾರೆ. ಸೈರನ್ ಮೂಲಕ ಜನರು ಸುರಕ್ಷಿತ ಪ್ರದೇಶದಲ್ಲಿ ಇರುವಂತೆ ಮುಂಜಾಗೃತೆಗಾಗಿ ವ್ಯವಸ್ಥೆ ಮಾಡಲಾಗಿದೆ. ಜನರು ಸರ್ಕಾರದ ಆದೇಶ ಪಾಲನೆ ಮಾಡಬೇಕು ಎಂದರು.

ಇಸ್ರೇಲ್​ನಲ್ಲಿರುವ ನಮ್ಮ ರಕ್ಷಣೆ, ಸುರಕ್ಷತೆಗಾಗಿ ಭಾರತೀಯ ರಾಯಭಾರಿ ಕಚೇರಿ ನಿರಂತರ ಸಂಪರ್ಕದಲ್ಲಿದ್ದು, ಅವರಿಗೆ ನಾವೆಲ್ಲರೂ ಚಿರಋಣಿಯಾಗಿದ್ದೇವೆ. ಸದ್ಯ ಕನ್ನಡಿಗರೆಲ್ಲರೂ ಒಂದು ವಾಟ್ಸ್‌ಆ್ಯಪ್ ಗ್ರೂಪ್​ ಮಾಡಿದ್ದು, ನಿರಂತರ ಸಂಪರ್ಕದಲ್ಲಿದ್ದು ಸುರಕ್ಷಿತರಾಗಿದ್ದೇವೆ ಎಂದು ಇಸ್ರೇಲ್‌ನಲ್ಲಿ ನೆಲೆಸಿರುವ ಸುನೀಲ್​ ಎಫ್​.ಗೋಮ್ಸ ಮತ್ತು ಡಾಲ್ಪಿ ಗೋಮ್ಸ ನಮ್ಮ ಪತಿನಿಧಿಯೊಂದಿಗೆ ಮಾತನಾಡಿದರು.

ಇಸ್ರೇಲ್​ನಲ್ಲಿ ನಡೆದ ರಾಕೆಟ್ ದಾಳಿಯ ಬಗ್ಗೆ ತಿಳಿದು ಒಂದು ಕ್ಷಣಕ್ಕೆ ನಮ್ಮ ಮಕ್ಕಳ ಪರಿಸ್ಥಿತಿಯ ಬಗ್ಗೆ ಭಯ ಉಂಟಾಯಿತು. ತಕ್ಷಣ ಅವರನ್ನು ವಿಡಿಯೋ ಕರೆ ಮೂಲಕ ಸಂಪರ್ಕಿಸಿದಾಗ ನಾವಿಬ್ಬರೂ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದರು. ನಮಗೆ ಸಮಾಧಾನವಾಯಿತು. ಅಲ್ಲಿಂದ ಇಲ್ಲಿಯತನಕ ನಾವು ನಿರಂತರವಾಗಿ ವಿಡಿಯೋ ಕರೆ ಮಾಡಿ ಅವರ ಪರಿಸ್ಥಿತಿ ಬಗ್ಗೆ ಕೇಳುತ್ತಿದ್ದೇವೆ. ಸ್ಥಳೀಯ ಪೊಲೀಸರು ಸಹ ನಮ್ಮನ್ನು ಹಾಗೂ ಕುಟುಂಬದವರನ್ನು ನಿತ್ಯವೂ ಸಂಪರ್ಕಿಸುತ್ತಿದ್ದು, ಭಾರತೀಯ ರಾಯಭಾರಿ ಕಚೇರಿಗೆ ನಾವೆಲ್ಲರು ಧನ್ಯವಾದ ತಿಳಿಸುತ್ತೇವೆ ಎಂದರು.

ಇದನ್ನೂ ಓದಿ: ಇಸ್ರೇಲ್‌ನಲ್ಲಿ ಸಿಲುಕಿದ ದಕ್ಷಿಣ ಕನ್ನಡ ಜಿಲ್ಲೆಯ ಹಲವರು; ಕುಟುಂಬಸ್ಥರಲ್ಲಿ ಆತಂಕ

Last Updated : Oct 9, 2023, 11:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.