ಭಟ್ಕಳ: ತಾಲೂಕು ಪಂಚಾಯತ್ ಅಧ್ಯಕ್ಷರಾದ ಈಶ್ವರ ನಾಯ್ಕ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಅವರು ಭಟ್ಕಳಕ್ಕೆ ಚಿಕಿತ್ಸೆಗೆಂದು ಬಂದಾಗ ಕೊರೊನಾ ಸೋಂಕು ತಗುಲಿರುವುದು ಕಂಡುಬಂದಿದೆ. ಭಟ್ಕಳದಲ್ಲಿ 46 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಕೋವಿಡ್ ತಪಾಸಣೆ ನಿರಂತರವಾಗಿ ನಡೆಯುತ್ತಿದೆ.
ಇನ್ನು ನನ್ನ ಸಂಪರ್ಕಕ್ಕೆ ಬಂದವರು ಸರ್ಕಾರಿ ಆಸ್ಪತ್ರೆ ಅಥವಾ ಪಕ್ಕದ ಯಾವುದೇ ಆರೋಗ್ಯ ಘಟಕಕ್ಕೆ ಭೇಟಿ ನೀಡಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈಶ್ವರ ನಾಯ್ಕ ತಿಳಿಸಿದ್ದಾರೆ.