ETV Bharat / state

ಭಟ್ಕಳ: ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು - RNS Hospital, Murudeshwar

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ.

dsd
ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
author img

By

Published : Sep 2, 2020, 12:10 PM IST

ಭಟ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.

ಮೃತನನ್ನು ಈಶ್ವರ ಕೃಷ್ಣಗೊಂಡ (25) ಎಂದು ಗುರುತಿಸಲಾಗಿದೆ. ಕಳೆದ ಆ. 24ರಂದು ವಿಷ ಸೇವಿಸಿದ್ದ ಈತನನ್ನು ಮುರುಡೇಶ್ವರದ ಆರ್.ಎನ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಸಂಬಂಧ ಮೃತನ ಸಹೋದರ ಸೋಮಯ್ಯಗೊಂಡ ಎಂಬುವವರು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.