ಮಂಗಳೂರು : ಬೈಕ್ ಅಪಘಾತದಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಲ್ಲಾಪು ಸಮೀಪದ ಆಡಂಕುದ್ರುವಿನಲ್ಲಿ ನಡೆದಿದೆ.
ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಪಾದಚಾರಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಇಬ್ಬರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಸಂಚಾರ ದಕ್ಷಿಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.