ಶಿರಸಿ : ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿವೋರ್ವ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ಉತ್ತರ ಕನ್ನಡದ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದೆ.
ಹಾನಗಲ್ ತಾಲೂಕು ಕ್ಯಾಸನೂರಿನ ಶಿವಾನಂದ ಅಮ್ಮಣ್ಣ ವಡ್ಡರ್ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೂಲಿ ಕೆಲಸಗಾರನಾಗಿದ್ದ ಈತನಿಗೆ ಬನವಾಸಿಯ ಸಮೀಪ ಹೆಬ್ಬತ್ತಿ ಕ್ರಾಸ್ ಬಳಿ ಅಪರಿಚಿತ ಬೈಕ್ ಡಿಕ್ಕಿ ಹೊಡೆದಿದೆ.
ಇನ್ನು ಡಿಕ್ಕಿಯಾಗುತ್ತಿದ್ದಂತೆ ಮೊತ್ತೊಂದು ಬೈಕ್ ಸವಾರ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಚಂದ್ರಶೇಖರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.