ಕಾರವಾರ: ಬೈಕ್ ಹಾಗೂ ಕಾರು ಮಧ್ಯೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಚಿತ್ತಾಕುಲದ ಸೀಬರ್ಡ್ ಕಾಲೋನಿಯ ಲೋಹಿತ್ ಕೇಶವ ಹರಿಕಂತ್ರ (೩೦) ಮೃತ ಬೈಕ್ ಸವಾರ. ಹಿಂಬದಿ ಸವಾರ ಸಾಗರ ಸುನೀಲ್ ಸಾಳಸ್ಕರ್ (೨೬) ಗಂಭೀರ ಗಾಯಗೊಂಡಿದ್ದಾನೆ.
ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಹೆದ್ದಾರಿಯಲ್ಲಿ ಬಿದ್ದಿದ್ದ ಲೋಹಿತ್ ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವವಾಗಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೋರ್ವ ಸವಾರನನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.