ಕಾರವಾರ: ಬಿಜೆಪಿಗರು ದಿನನಿತ್ಯವೂ ಕುರ್ಚಿಗಾಗಿ ದೆಹಲಿ ಪರೇಡ್ ನಡೆಸುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಇಂದು ಕಿತ್ತು ಹಾಕುತ್ತೇವೆ, ನಾಳೆ ಕುರ್ಚಿ ಬಿಡ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ಕಿತ್ತಾಟದಿಂದ ರಾಜ್ಯದಲ್ಲಿ ಕೋವಿಡ್ ನಿಯಂತ್ರಣವನ್ನು ಸಂಪೂರ್ಣ ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಎಕ್ಸಾಮ್ ಬರೆದಿದ್ದೇವೆ, ರಿಸಲ್ಟ್ಗಾಗಿ ಕಾಯುತ್ತಿದ್ದೇವೆ ಅಂತಾ ಸಚಿವ ಸಿ.ಪಿ.ಯೋಗೇಶ್ವರ್ ಹೇಳುತ್ತಾರೆ. ಇತ್ತ ಯತ್ನಾಳ್ ಅವರು, ದಿನಾಂಕ ನೀಡಲಾಗಿದೆ. ಆ ದಿನ ಬದಲಾಗುತ್ತಾರೆ ಎನ್ನುತ್ತಿದ್ದಾರೆ. ನಮ್ಮ ತಟ್ಟೆಯಲ್ಲಿ ಸೊಳ್ಳೆ ಬಿದ್ದಿರಬಹುದು. ಆದ್ರೆ, ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಏಳು ಜನ ಸಿವಿಲ್ ಡಿವೈಎಸ್ಪಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ