ETV Bharat / state

3 ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ: ನಳೀನ್​​​ ಕುಮಾರ ಕಟೀಲ್​

ಬೆಳಗಾವಿ, ಹುಬ್ಬಳ್ಳಿ - ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಳೀನ್​​​ ಕುಮಾರ ಕಟೀಲ್​
ನಳೀನ್​​​ ಕುಮಾರ ಕಟೀಲ್​
author img

By

Published : Sep 13, 2021, 12:21 PM IST

ಭಟ್ಕಳ: 3 ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಭಟ್ಕಳದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿ, ಹುಬ್ಬಳ್ಳಿ - ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದರು.

ಭಟ್ಕಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ

ಮೈಸೂರು ನಂಜನಗೂಡು ದೇವಾಲಯ ಕೆಡವಿರುವ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಆರೋಪಕ್ಕೆ ಉತ್ತರಿಸಿದ ಅವರು, ಮೈಸೂರು ದೇವಾಲಯದ ವಿಷಯದಲ್ಲಿ ಸುಪ್ರೀಂಕೋರ್ಟ್ ತೀರ್ಮಾನವನ್ನು ಅಧಿಕಾರಿಗಳು ಅನುಷ್ಠಾನಕ್ಕೆ ತಂದಿದ್ದಾರೆ.

ಆದರೆ, ಧಾರ್ಮಿಕ ಕೇಂದ್ರಗಳನ್ನು ಒಡೆಯುವ ಮುನ್ನ ಪೂರ್ವಾಪರ ವಿಮರ್ಶೆ ನಡೆಸಬೇಕು ಎನ್ನುವುದು ಪಕ್ಷದ ನಿಲುವಾಗಿದ್ದು, ದೇವಾಲಯವನ್ನು ಉಳಿಸುವುದು ನಮ್ಮ ಬೇಡಿಕೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ ಎಂದರು.

ನಂತರ ಗುಜರಾತ್ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣೆ ಗೋಸ್ಕರವೇ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಲು ಸಾಧ್ಯವಿಲ್ಲ, ಅದು ಪಕ್ಷದ ವರಿಷ್ಠರು ತೀರ್ಮಾನವಾಗಿದೆ ಎಂದು ವಿವರಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.