ಕಾರವಾರ: ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆವರಣದಲ್ಲಿ ತಮ್ಮ ನೂತನ ಕಚೇರಿ ಉದ್ಘಾಟಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಚುನಾವಣೆಯ ಉಸ್ತುವಾರಿಯನ್ನು ನಾನೂ ಸಹ ವಹಿಸಿಕೊಂಡಿದ್ದೆ. ಚುನಾವಣೆಗೆ ಶಿವಸೇನೆ ಹಾಗೂ ಬಿಜೆಪಿ ಒಟ್ಟಾಗಿ ಸ್ಪರ್ಧಿಸಿದ್ದು, ಇದೀಗ ಲೀಡ್ ನೋಡಿದರೆ 130 ಕ್ಕೂ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲುವ ವಿಶ್ವಾಸವಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ ಎಂದು ಹೇಳಿದರು.
ಇನ್ನು ಜಿಲ್ಲೆಯ ಜನರಿಗೆ ಅನುಕೂಲವಾಗುವಂತೆ ಸಂಪರ್ಕಕ್ಕಾಗಿ ಕಚೇರಿ ತೆರೆಯಲಾಗಿದೆ. ಇಲ್ಲಿ ಸಿಬ್ಬಂದಿ ಇರಲಿದ್ದು, ಕ್ಷೇತ್ರದ ಜನರು ತಮ್ಮ ದೂರುಗಳನ್ನು ಸಲ್ಲಿಸಬಹುದು. ಜಿಲ್ಲೆಯ ಎಲ್ಲ ಶಾಸಕರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.