ಶಿರಸಿ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಾ ಸಾಗುತ್ತಿದೆ. ನಿನ್ನೆಯಷ್ಟೇ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಪೋಟವಾಗಿದೆ.
ಕ್ಷೇತ್ರದವರಿಗೆ ಟಿಕೆಟ್ ನೀಡದಿರುವ ಬಗ್ಗೆ ಪಕ್ಷದೊಳಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಯುವ ಮುಖಂಡ ಲಕ್ಷ್ಮಣ ಬನ್ಸೋಡ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದು ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
50 ವರ್ಷಗಳಲ್ಲಿ ಮುಂಡಗೋಡ ತಾಲೂಕಿನ ಯಾವ ವ್ಯಕ್ತಿಗೂ ಕಾಂಗ್ರೆಸ್ ಬಿ ಫಾರ್ಮ್ ನೀಡಿಲ್ಲ. ಇನ್ನೂ ಸಮಯವಿದೆ. ಪಕ್ಷ ಸೂಕ್ತ ನಿರ್ಧಾರ ತೆಗೆದುಕೊಳ್ಳದೇ ಹೋದಲ್ಲಿ 18 ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಬನ್ಸೋಡ್ ಎಚ್ಚರಿಕೆ ನೀಡಿದ್ದಾರೆ.