ETV Bharat / state

ಉಪಚುನಾವಣೆ ರಣಕಹಳೆ ಊದಿದ ಸಿದ್ದು: ಹೆಬ್ಬಾರ್ ವಿರುದ್ಧ ನಾಳೆ ಸಮಾವೇಶ - uttara kannada leatest news

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಉಪ ಚುನಾವಣೆಗೆ ರಣಕಹಳೆ ಊದಲಿದ್ದು, ಒಂದು ಕಾಲದ ಆಪ್ತರಾಗಿದ್ದ ಅನರ್ಹ ಶಾಸಕ ಹೆಬ್ಬಾರ್ ವಿರುದ್ಧ ರಣತಂತ್ರ ರಚಿಸಲು ನಾಳೆ ಸಮಾವೇಶ ಹಮ್ಮಿಕೊಂಡಿದ್ದಾರೆ.

ಉಪಚುನಾವಣೆ ರಣಕಹಳೆ ಊದಿದ ಸಿದ್ದು: ಹೆಬ್ಬಾರ್ ವಿರುದ್ಧ ನಾಳೆ ಸಮಾವೇಶ
author img

By

Published : Nov 3, 2019, 10:11 PM IST

ಶಿರಸಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಉಪ ಚುನಾವಣೆಗೆ ರಣಕಹಳೆ ಊದಲಿದ್ದಾರೆ. ಒಂದು ಕಾಲದ ಆಪ್ತರಾಗಿದ್ದ ಅನರ್ಹ ಶಾಸಕ ಹೆಬ್ಬಾರ್ ವಿರುದ್ಧ ರಣತಂತ್ರ ರಚಿಸಲು ನಾಳೆ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ.

ಉಪಚುನಾವಣೆ ರಣಕಹಳೆ ಊದಿದ ಸಿದ್ದು: ಹೆಬ್ಬಾರ್ ವಿರುದ್ಧ ನಾಳೆ ಸಮಾವೇಶ
ಉಪ ಚುನಾವಣೆಗೆ ಸಮಯ ನಿಗದಿಯಾಗಿ ಕಾಂಗ್ರೆಸ್ ಎಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ಜಿಲ್ಲೆಯ ಯಲ್ಲಾಪುರ ಕ್ಷೇತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಅವರಿಗೆ ಟಿಕೇಟ್ ನೀಡಲಾಗಿದೆ. ಇದರ ಬೆನ್ನಲ್ಲೇ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ಸಿದ್ದರಾಮಯ್ಯ ನೇತೃತ್ವದಲ್ಲಿ ಕೈಪಾಳಯ ಸಿದ್ಧತೆ ನಡೆಸಿದೆ.
ಅನರ್ಹ ಶಾಸಕ ಶಿವರಾಮ್​ ಹೆಬ್ಬಾರ್ ಒಂದು ಕಾಲದಲ್ಲಿ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೇ ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದ ಸಂದರ್ಭದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕರೆಸಿದ್ದರು. ಆದರೆ ಈಗ ಹೆಬ್ಬಾರ್ ವಿರುದ್ಧವೇ ಸಿದ್ದರಾಮಯ್ಯ ಪ್ರಚಾರಕ್ಕೆ ಬರುವುದು ಎಲ್ಲರಲ್ಲಿ ಕುತೂಹಲ ಮೂಡಿಸಿದೆ.

Intro:ಶಿರಸಿ :
ಕಾಂಗ್ರೆಸ್ ಪಕ್ಷದ ಮಾಸ್ ಲೀಡರ್ ಆಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಉಪ ಚುನಾವಣೆಗೆ ರಣಕಹಳೆ ಉದಲಿದ್ದಾರೆ. ಒಂದು ಕಾಲದ ಆಪ್ತರಾಗಿದ್ದ ಅನರ್ಹ ಶಾಸಕ ಹೆಬ್ಬಾರ್ ವಿರುದ್ಧ ರಣತಂತ್ರ ರಚಿಸಲು ಸೋಮವಾರ ( ನ.೪ ) ದಂದು ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ.

ಉಪ ಚುನಾವಣೆಗೆ ಸಮಯ ನಿಗದಿಯಾಗಿ ಕಾಂಗ್ರೆಸ್ ಎಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಜಿಲ್ಲೆಯ ಯಲ್ಲಾಪುರ ಕ್ಷೇತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಅವರಿಗೆ ಟಿಕೇಟ್ ನೀಡಲಾಗಿದೆ. ಇದರ ಬೆನ್ನಲ್ಲೇ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ನಾಯಕರ ದಂಡು ಸಮಾವೇಶದಲ್ಲಿ ಪಾಲ್ಗೊಳ್ಳಲಿದೆ.

ಸಿದ್ದರಾಮಯ್ಯ ಆಪ್ತ !
ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಒಂದು ಕಾಲದಲ್ಲಿ ಸಿದ್ದರಾಮಯ್ಯ ನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಮಾತು ಮಾತಿಗೆ ಬಡವರ ನಾಯಕ ನಮ್ಮ ಸಿದ್ದರಾಮಯ್ಯ ಎಂದು ಹೇಳುತ್ತಿದ್ದರು. ಅಲ್ಲದೇ ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದ ಸಂದರ್ಭದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕರೆಸಿದ್ದರೂ ಸಹ. ಆದರೆ ಈಗ ಹೆಬ್ಬಾರ್ ವಿರುದ್ಧವೇ ಸಿದ್ದರಾಮಯ್ಯ ಪ್ರಚಾರಕ್ಕೆ ಬರುವುದು ಎಲ್ಲರಲ್ಲಿ ಕುತೂಹಲ ಮೂಡಿಸಿದೆ.

ಜಿಲ್ಲೆಗೆ ಬಾರದ ಮುಖ್ಯಮಂತ್ರಿ !
ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾವಿರಾರು ಕೋಟಿ ರೂ. ಹಾನಿಯಾಗಿದ್ದರೂ ಸಹ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪ ಒಮ್ಮೆಯೂ ಸಹ ಭೇಟಿ ನೀಡಿಲ್ಲ. ಆದರೆ ಈಗ ಸಿದ್ದರಾಮಯ್ಯ ಪ್ರಚಾರದ ನಿಮಿತ್ತ ಭೇಟಿ ನೀಡುತ್ತಿದ್ದರೂ ಇಲ್ಲಿಯ ಜನರ ಸಮಸ್ಯೆ ಆಲಿಸುವ ಸಾಧ್ಯತೆಗಳಿದೆ. ಮುಖ್ಯಮಂತ್ರಿಗಳು ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಆಕ್ರೋಶವೂ ಇಲ್ಲಿಯ ಜನರಲ್ಲಿದ್ದು, ಅದನ್ನು ಸದುಪಯೋಗ ಮಾಡಿಕೊಳ್ಳುವ ಸಾಧ್ಯತೆಗಳಿದೆ.

Body:ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಿಲ್ಲೆಯ ಹಿರಿಯ ನಾಯಕ ಆರ್.ವಿ.ದೇಶಪಾಂಡೆ,
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಘಟಾನುಘಟಿ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. ಹೆಬ್ಬಾರ್ ಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಸಮಾವೇಶ ಹಮ್ಮಿಕೊಂಡಿದ್ದು, ಇದು ಯಾವ ರೀತಿ ಅಭ್ಯರ್ಥಿಗೆ ಉಪಯೋಗ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
.........
ಸಂದೇಶ ಭಟ್ ಶಿರಸಿ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.