ETV Bharat / state

ಭಟ್ಕಳ ಮತ್ತು ಶಿರಸಿಯಲ್ಲಿ ಎಸ್​ಡಿಪಿಐನಿಂದ ಅಭ್ಯರ್ಥಿ ಘೋಷಣೆ : ಕಾಂಗ್ರೆಸ್ ಮತ್ತು ಬಿಜೆಪಿಗೆ ಸೆಡ್ಡು - ನಳೀನ್​ ಕುಮಾರ್ ಕಟೀಲ್

ನಾವು ಲವ್​ ಜಿಹಾದ್​ ಹೆಸರಿನಲ್ಲಿ ಚುನಾವಣೆಗೆ ಹೋಗಬೇಕು ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿಕೆ ನೀಡುತ್ತಾರೆ ಎಂದು ಎಸ್.ಡಿ.ಪಿ.ಐ ರಾಜ್ಯಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು ಹೇಳಿದ್ದಾರೆ.

ಎಸ್.ಡಿ.ಪಿ.ಐ ರಾಜ್ಯಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ

author img

By

Published : Mar 12, 2023, 4:29 PM IST

ಎಸ್.ಡಿ.ಪಿ.ಐ ರಾಜ್ಯಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ

ಭಟ್ಕಳ : ಭಟ್ಕಳ, ಶಿರಸಿಯಲ್ಲಿ ಇದೇ ಮೊದಲ ಬಾರಿಗೆ ಎಸ್.ಡಿ.ಪಿ.ಐ ಸಂಘಟನೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಲು ಸಿದ್ಧವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಗೆ ಸೆಡ್ಡು ಹೊಡೆಯಲು ಮುಂದಾಗಿದೆ.

ಭಟ್ಕಳ ಶಿರಸಿ ವಿಧಾನಸಭಾ ಕ್ಷೇತ್ರಕ್ಷೆ ಎಸ್.ಡಿ.ಪಿ.ಐ ನಿಂದಲೂ ಅಭ್ಯರ್ಥಿ ಕಣಕ್ಕೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸುನಿಲ್ ನಾಯ್ಕಗೆ ಸೆಡ್ಡು ಹೊಡೆಯಲು ಸಿದ್ಧವಾದ ಎಸ್.ಡಿ.ಪಿ.ಐ. ಕರಾವಳಿ ಭಾಗದಲ್ಲಿ ಕೋಮು ಸಂಘರ್ಷಗಳು ಹಲವು ಪಕ್ಷಗಳಿಗೆ ವರವಾದರೇ ಸಂಘಟನೆಗಳಿಗೆ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸಿಕೊಳ್ಳಲು ಸಹ ಸಹಕಾರಿಯಾಗುತ್ತಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗೂ ತಮ್ಮವರನ್ನು ನಿಲ್ಲಿಸುವಷ್ಟರ ಮಟ್ಟಿಗೆ ಬೆಳೆದಿವೆ.

ಭಟ್ಕಳ ಮತ್ತು ಶಿರಸಿ ಭಾಗದಲ್ಲಿ ಹಿಂದೂ ಸಂಘಟನೆಯಂತೆಯೇ ಎಸ್.ಡಿ.ಪಿ.ಐ ಹಾಗೂ ಪಿ.ಎಫ್.ಐ ಸಂಘಟನೆ ಸಹ ದೊಡ್ಡಮಟ್ಟದಲ್ಲಿ ಬೆಳೆದು ನಿಂತಿದ್ದು, ಗ್ರಾಮಪಂಚಾಯ್ತಿ, ಪುರಸಭೆಗಳಲ್ಲಿ ಎಸ್​​ಡಿಪಿಐ ತಮ್ಮವರನ್ನು ಕಣಕ್ಕಿಳಿಸಿ ಒಟ್ಟು 9 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. ಇದೀಗ ಭಟ್ಕಳದಿಂದ ಎಸ್ ಡಿಪಿಐ ಜಿಲ್ಲಾಧ್ಯಕ್ಷ ತೋಫಿಕ್ ಬ್ಯಾರಿ ಅವರನ್ನು ಕಣಕ್ಕಿಳಿಸಲಿದ್ರೆ, ಶಿರಸಿಯಲ್ಲಿ ಹಿಂದೂ ಮುಖಂಡರನ್ನೇ ಅಖಾಡಕ್ಕಿಳಿಸಲು ಸಜ್ಜಾಗಿದೆ.

ಇನ್ನು, ಭಟ್ಕಳದಲ್ಲಿ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ ಹೊಣೆ ಹೊತ್ತಿರುವ ಅಪ್ಸರ್ ಕೊಡ್ಲಿಪೇಟೆ ಅವರು ಉತ್ತರ ಕನ್ನಡ ಜಿಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾ ಸ್ಪರ್ಧಾಕಾಂಕ್ಷಿಗಳ ಸಭೆ ನಡೆಸಿ ಮಾತನಾಡಿದ ಅವರು, ಆಡಳಿತ ಪಕ್ಷದ ರಾಜ್ಯಾಧ್ಯಕ್ಷ ನಳೀನ್​ ಕುಮಾರ್ ಕಟೀಲ್ ಬಿಜೆಪಿಯ ಕಾರ್ಯಕರ್ತರ ಸಭೆಯಲ್ಲಿ ಹೇಳುವಂತೆ, ರಸ್ತೆ, ಸೇತುವೆ, ಮೇಲ್ಸೆತುವೆ ಇಂತಹ ಅಭಿವೃದ್ಧಿಯ ವಿಚಾರದಲ್ಲಿ ಚುನಾವಣೆಯನ್ನು ಎದುರಿಸುವುದು ಬೇಡ, ನಾವು ಲವ್​ ಜಿಹಾದ್​ ಹೆಸರಿನಲ್ಲಿ ಚುನಾವಣೆಗೆ ಹೋಗಬೇಕು. ಇವರು ಸರ್ಕಾರದ ಸಾಧನೆ, ಅಭಿವೃದ್ಧಿಯ ವಿಚಾರಗಳನ್ನು ಇಟ್ಟುಕೊಂಡು ಚುನಾವಣೆಗೆ ಹೋಗಬೇಕಿತ್ತು ಎಂದು ವ್ಯಂಗ್ಯವಾಡಿದರು.

ಕೆರೆಯ ಹೂಳೆತ್ತುವುದಕ್ಕೂ ನೀವು ನಾಲಾಯಕ್-ಅಪ್ಸರ್ ಕೊಡ್ಲಿಪೇಟೆ: ಮತ್ತೊಬ್ಬ ಸಚಿವರು ಹೇಳುತ್ತಾರೆ, ಈ ಚುನಾವಣೆ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ ನಡುವಿನ ಚುನಾವಣೆ ಎನ್ನುತ್ತಾರೆ. ಟಿಪ್ಪು ಸುಲ್ತಾನ್ ಅವರ ಹೆಸರು ಹೇಳುವುದಕ್ಕೆ ನೀವು ನಾಲಾಯಕ್​. ಟಿಪ್ಪು ಸುಲ್ತಾನ್​ ಯಾರೆಂದರೆ 200 ವರ್ಷಗಳ ಹಿಂದೆ ಸುಮಾರು 25000 ಕೆರೆ ಕಟ್ಟೆಗಳನ್ನು ಅಭಿವೃದ್ಧಿ ಮಾಡಿದಂತಹ ಮಹಾನ್ ರಾಜ. ಅವರ ಕಾಲದಲ್ಲಿ ನಿರ್ಮಿಸಿದ್ದ ಕೆರೆಯ ಹೂಳೆತ್ತುವುದಕ್ಕೂ ನಿಮಗೆ ಅರ್ಹತೆ ಇಲ್ಲ. ಅವರ ಹೆಸರು ಹೇಳಿಕೊಂಡು ನೀವು ಚುನಾವಣೆಗೆ ಏನ್​ ಹೋಗ್ತಿರಾ ಎಂದು ಅಪ್ಸರ್​ ಕಿಡಿಕಾರಿದರು.

ನಮ್ಮ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಚುನಾವಣಾ ಕಣಕ್ಕಿಳಿಯಲಿದ್ದಾರೆ. ಬೆಂಗಳೂರಿನ ಪುಲಕೇಶಿನಗರ ರಿಸರ್ವ್​ ಕ್ಷೇತ್ರದಲ್ಲಿ ನಮ್ಮ ರಾಜ್ಯ ಪ್ರಧಾನ ಕಾರ್ಯದರ್ಶೀ ಬಿ ಆರ್ ಬಾಸ್ಕರ್ ಪ್ರಸಾದ್​ ಅವರು ಕಣಕ್ಕಿಳಿಯುತ್ತಿದ್ದಾರೆ. ಬೆಂಗಳೂರಿನ ಸರ್ವಜ್ಞ ವಿಧಾನಸಭಾ ಕ್ಷೇತ್ರದಿಂದ ರಾಷ್ಟ್ರೀಯ ಸಮಿತಿಯ ಸದಸ್ಯರಾದ ಅಬ್ದುಲ್ ಹನ್ನಾದ್ ಅವರು ಕಣಕ್ಕಿಳಿಯುತ್ತಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಇಸ್ಮಾಯಿಲ್ ಜಭಿವುಲ್ಲಾ ಅವರು ಸ್ಫರ್ಧಿಸುತ್ತಿದ್ದಾರೆ. ಚಿತ್ರದುರ್ಗ ಕ್ಷೇತದಿಂದ ಬಾಳೆಕಾಯಿ ಶ್ರೀನಿವಾಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಹೊಸಪೇಟೆ ವಿಧಾನಸಭಾ ಕ್ಷೇತ್ರದಿಂದ ನಜೀರ್ ಖಾನ್ ಕಣಕ್ಕಿಳಿಯುತ್ತಿದ್ದಾರೆ.

ಜಾತ್ಯತೀತ, ಭ್ರಷ್ಟಾಚಾರ ಮುಕ್ತ ಆಡಳಿತ ಕೊಡುವ ದೃಷ್ಟಿಯಿಂದ ಚುನಾವಣೆಗೆ ಈಬಾರಿ ರಾಜ್ಯದಲ್ಲಿ 54 ಕ್ಷೇತ್ರದಲ್ಲಿ ಸ್ಪರ್ಧಿಸುತಿದ್ದು, 19 ಕ್ಷೇತ್ರಗಳಲ್ಲಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಘೋಷಣೆ ಆಗಲಿದೆ ಎಂದರು.

ಇದನ್ನೂ ಓದಿ : ಮೈಸೂರು - ಬೆಂಗಳೂರು ಎಕ್ಸ್​ಪ್ರೆಸ್​ ವೇ ಉದ್ಘಾಟಿಸಿದ ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.