ETV Bharat / state

ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ತಪ್ಪಿದ ಅನಾಹುತ - ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

Car Accident in Bhatkal
ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ
author img

By

Published : Jun 18, 2020, 10:18 AM IST

ಭಟ್ಕಳ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ರಾಘವೇಂದ್ರ ಮಠದ ಮುಂಭಾಗದಲ್ಲಿ ಆಂಧ್ರಪ್ರದೇಶ ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿರುವ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ರಸ್ತೆಗೆ ವಾಲಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ತಕ್ಷಣ ಸ್ಥಳೀಯರು ಹೆಸ್ಕಾಂಗೆ ಕರೆ ಮಾಡಿ ವಿದ್ಯುತ್ ಕಡಿತಗೊಳಿಸಲು ಸೂಚಿಸಿದ್ದಾರೆ. ಬಳಿಕ ಲೈನ್‍ಮ್ಯಾನ್ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿದರು. ಒಂದು ವೇಳೆ ವಿದ್ಯುತ್ ಕಂಬ ಅಥವಾ ವಿದ್ಯುತ್ ತಂತಿ ರಸ್ತೆಗೆ ಬೀಳುತ್ತಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಘಟನೆಯಿಂದ ಕೆಲ ಹೊತ್ತು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ಬಂದ ನಗರ ಠಾಣೆ ಪೊಲೀಸರು ಸಂಚಾರ ಸುಗಮಗೊಳಿಸಿದರು. ಕಾರು ಕಂಬಕ್ಕೆ ಗುದ್ದಿದ ಹಿನ್ನೆಲೆಯಲ್ಲಿ ಹಾನಿಗೊಂಡ ವಿದ್ಯುತ್ ಕಂಬ ಸರಿಪಡಿಸಲು ಹೆಸ್ಕಾಂ ಅಧಿಕಾರಿಗಳು ಚಾಲಕನಿಂದ 10 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.