ಭಟ್ಕಳ: ಇಲ್ಲಿನ ಬೆಳಕೆ ಗೋಳಿಮರ ಕ್ರಾಸ್ ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗು ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಚಿಕ್ಕ ಪುಟ್ಟ ಗಾಯದೊಂದಿಗೆ ಕಾರು, ಬಸ್ಸಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.
ಅಂಕೋಲಾ ಮಾರ್ಗವಾಗಿ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು , ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ.
ಕಾರು ಚಾಲಕ ಜೀತಿನ್ ಅತೀ ವೇಗದಿಂದ ಕಾರು ಚಲಾಯಿಸಿಕೊಂಡು ಬಂದು ಓವರಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕಾರು ಒಂದು ಸುತ್ತು ತಿರುವಿ ಚಲಿಸುತ್ತಿದ್ದ ಇನ್ನೊಂದು ಖಾಸಗಿ ಬಸ್ಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರಿನ ಮುಂಬಾಗ ಸಂಪೂರ್ಣ ಖಜಂಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಚಿಕ್ಕಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಇನ್ನು ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಆದರೆ, ಇನ್ನೊಂದು ಖಾಸಗಿ ಬಸ್ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಅದೂ ಸಹ ಜಖಂಗೊಂಡಿದೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.