ಕಾರವಾರ (ಉ.ಕ) : ಚಲಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಅಂಕೋಲಾ ತಾಲೂಕಿನ ಹೆಬ್ಬುಳ ಗ್ರಾಮದ ಬಳಿ ಸಂಭವಿಸಿದೆ. ಅಂಕೋಲಾ-ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಧಾರವಾಡ ಮೂಲದ ಇಬ್ಬರು ಹುಬ್ಬಳ್ಳಿಯಿಂದ ಟಾಟಾ ಟಿಯಾಗೋ ಕಾರಿನಲ್ಲಿ ಕುಮಟಾಗೆ ಪ್ರಯಾಣಿಸುವ ವೇಳೆ ಅವಘಡ ಸಂಭವಿಸಿದೆ.
ಹೆಬ್ಬುಳದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಇಬ್ಬರು ಹೊರಗೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಬೆಂಗಳೂರಲ್ಲಿ 4 ಕೋಟಿ ಮೌಲ್ಯದ ಚಿನ್ನಾಭರಣಕ್ಕೆ ಕನ್ನ: ಮೂಟೆ ಕಟ್ಟುವಾಗ ಸಿಕ್ಕಿಬಿದ್ದ ಖದೀಮರು