ಶಿರಸಿ : ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮದುಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೋಟೆಲ್ ಬಳಿ ಜರುಗಿದೆ.
ದಾಂಡೇಲಿಯ ಮದುಮಗ ಅಫ್ರೋಜ್ ಶೇಖ್ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹಾನಗಲ್ನಲ್ಲಿ ಇಂದು ನಡೆಯಬೇಕಿದ್ದ ಮದುವೆಗೆ ಕಾರಿನಲ್ಲಿ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ.
![ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ಅಪಘಾತ, Car tanker Accident sirsi](https://etvbharatimages.akamaized.net/etvbharat/prod-images/kn-srs-02-accident-death-photo-ka10005_17112019181128_1711f_1573994488_464.jpg)
ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳಿಗೆ ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.