ETV Bharat / state

ಶ್ರೀಪಾದ್ ನಾಯಕ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ: ಗೋವಾ ಸಿಎಂ ಪ್ರಮೋದ್ ಸಾವಂತ್ - ಸಚಿವ ಶ್ರೀಪಾದ್ ಯೆಸ್ಸೋ ನಾಯಕ್

Central minister Shripad Naik
Central minister Shripad Naik
author img

By

Published : Jan 11, 2021, 9:18 PM IST

Updated : Jan 12, 2021, 12:39 AM IST

00:36 January 12

ಶ್ರೀಪಾದ್ ನಾಯಕ್ ಆರೋಗ್ಯ ಸ್ಥಿತಿ ಸ್ಥಿರ

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಂದು ರಾತ್ರಿಯೇ ಸಣ್ಣ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುವುದು. ತಕ್ಷಣಕ್ಕೆ ಅವರನ್ನು ಚಿಕಿತ್ಸೆಗಾಗಿ ದೆಹಲಿಗೆ ಸ್ಥಳಾಂತರಿಸುವ ಅಗತ್ಯವಿಲ್ಲ ಎಂದು  ಗೋವಾ ಸಿಎಂ ಪ್ರಮೋದ್ ಸಾವಂತ್ ಸ್ಪಷ್ಟಪಡಿಸಿದ್ದಾರೆ.  

22:44 January 11

ಗಂಟೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಚಿವರು

Central minister Shripad Naik
ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಚಿವರು

ಯಲ್ಲಾಪುರ ತಾಲೂಕಿನ ಗಂಟೆ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ಗೋಕರ್ಣಕ್ಕೆ ತೆರಳುವಾಗ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಕಾರು ಪಲ್ಟಿಯಾಗಿದೆ.

22:42 January 11

ಅಪಘಾತದಲ್ಲಿ ಗಾಯಗೊಂಡಿರುವ ಸಚಿವರಿಗೆ ಎಲ್ಲ ವ್ಯವಸ್ಥೆ ಕಲ್ಪಿಸುವಂತೆ ಗೋವಾ ಸಿಎಂಗೆ ಪ್ರಧಾನಿ ಮೋದಿ ಸೂಚನೆ

Central minister Shripad Naik
ಸಚಿವ ಶ್ರೀಪಾದ್ ನಾಯಕ್​ ಹಾಗೂ ಪತ್ನಿ ವಿಜಯಾ

ಅಪಘಾತದಲ್ಲಿ ಗಾಯಗೊಂಡಿರುವ ಸಚಿವ ಶ್ರೀಪಾದ್​ ನಾಯಕ್​ ಅವರಿಗೆ ಗೋವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಲ್ಲಿನ  ಮುಖ್ಯಮಂತ್ರಿ ಪ್ರಮೋದ್​ ಸಾವಂತ್ ಜತೆ ಪ್ರಧಾನಿ ಮಾತುಕತೆ ನಡೆಸಿ, ಚಿಕಿತ್ಸೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.  

ಘಟನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಶ್ರೀಪಾದ್​ ನಾಯಕ್​ ಪತ್ನಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

21:57 January 11

ಕಾರಿನಲ್ಲಿದ್ದ ಸಚಿವರ ಆಪ್ತ ಕಾರ್ಯದರ್ಶಿ ದೀಪಕ್ ಗುಮೆ ಸಾವು

Central minister Shripad Naik
ಅಪಘಾತಕ್ಕೊಳಗಾದ ಸಚಿವರ ಕಾರು

ಕಾರಿನಲ್ಲಿದ್ದ ಸಚಿವರ ಪತ್ನಿ ವಿಜಯಾ ನಾಯಕ್, ಆಪ್ತ ಕಾರ್ಯದರ್ಶಿ ದೀಪಕ್ ಗುಮೆ ಸಾವು

21:48 January 11

ಹೊಸಕಂಬಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತ

Central minister Shripad Naik
ಸಚಿವರ ಸ್ಥಿತಿ ಗಂಭೀರ

ಅಂಕೋಲಾ ತಾಲ್ಲೂಕಿನ ಹೊಸಕಂಬಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್​ ಸಚಿವ ಶ್ರೀಪಾದ್​ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.

21:16 January 11

ಅಪಘಾತದಲ್ಲಿ ಸಾವನ್ನಪ್ಪಿದ ಕೇಂದ್ರ ಸಚಿವರ ಪತ್ನಿ

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ

ಉತ್ತರ ಕನ್ನಡ(ಅಂಕೋಲಾ): ಕೇಂದ್ರ ಆಯುಷ್ ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಅವರು ಚಲಿಸುತ್ತಿದ್ದ ಕಾರು ಉತ್ತರ ಕನ್ನಡದ ಹೊಸಕಂಬಿ ಬಳಿ ಪಲ್ಟಿಯಾಗಿದೆ. ಈ ವೇಳೆ ಸಚಿವರ ಪತ್ನಿ ವಿಜಯಾ ನಾಯಕ್ ಹಾಗೂ ಆಪ್ತ ಕಾರ್ಯದರ್ಶಿ ದೀಪಕ್ ಗುಮೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಸಚಿವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಯಲ್ಲಾಪುರ ತಾಲೂಕಿನ ಗಂಟೆ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ಗೋಕರ್ಣಕ್ಕೆ ತೆರಳುವಾಗ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಕಾರು ಪಲ್ಟಿಯಾಗಿತ್ತು. ದುರ್ಘಟನೆಯ ವೇಳೆ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಸಚಿವರೂ ಸೇರಿ ಮೂವರಿಗೆ ಗಾಯವಾಗಿದೆ. ಸಚಿವರ ಪತ್ನಿ ವಿಜಯಾ ನಾಯಕ್ ಅವರನ್ನು ಆಸ್ಪತ್ರೆಗೆ ಸಾಗಿಸುವಾದ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಗೊಂಡವರಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗೋವಾದ ಬಾಂಬೋಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಬಿಜೆಪಿ ಪಕ್ಷದ ಮುಖಂಡರು ದೌಡಾಯಿಸಿ ಪರಿಶೀಲನೆ ನಡೆಸಿದರು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jan 12, 2021, 12:39 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.