ಭಟ್ಕಳ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರನಾ ವೈರಸ್ ತಾಲೂಕಿಗೂ ಕಾಲಿಟ್ಟಿದೆ. ವಿದೇಶದಿಂದ ಬಂದವರು ಹಾಗೂ ಅವರ ಸಂಪರ್ಕದಲ್ಲಿದ್ದ ಎಂಟು ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಮಹಾಮಾರಿ ತೊಲಗಿಸಲು ಪೌರ ಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದಾರೆ.
ಈಗಾಗಲೇ ತಾಲೂಕಿನಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಲಾಗಿದೆ. ಭಟ್ಕಳ ಪಟ್ಟಣ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂರಕ್ಕೂ ಅಧಿಕ ಮನೆಗಳಲ್ಲಿ ವಿದೇಶದಿಂದ ಬಂದವರನ್ನ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಸೋಂಕು ಹರಡದಂತೆ ತಡೆಯಲು ಜಾಗೃತಿ ಮೂಡಿಸುತ್ತಾ, ಔಷಧಿ ಸಿಂಪಡಣೆ ಮಾಡುತ್ತಾ ಪೌರ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಜಾಲಿ ಪಟ್ಟಣ ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂರು ಜನ ಪೌರ ಕಾರ್ಮಿಕರು ಆರೋಗ್ಯಾಧಿಕಾರಿ ಅಜಯ್ ಭಂಡಾರಕರ್ ಜೊತೆಗೂಡಿ ಬೀದಿಗಿಳಿದು ಔಷಧ ಸಿಂಪಡಣೆ ಕಾರ್ಯದಲ್ಲಿ ತೊಡಗಿದ್ದಾರೆ.