ಕಾರವಾರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಧರ್ಮಪತ್ನಿ ಚನ್ನಮ್ಮ ಬೊಮ್ಮಾಯಿ ಅವರು ಇಲ್ಲಿನ ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಕುಟುಂಬ ಸದಸ್ಯರೊಂದಿಗೆ ಆಗಮಿಸಿದ್ದ ಇವರು ಮೊದಲು ಮಹಾಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಮಹಾಬಲೇಶ್ಚರ ದೇವಾಲಯದಲ್ಲಿ ದೇವಾಲಯದ ಮೇಲುಸ್ತುವಾರಿ ಸಮಿತಿ ಸದಸ್ಯ ವೇ. ಮಹಾಬಲ ಉಪಾಧ್ಯ, ವೇ. ಪರಮೇಶ್ವರ ಮಾರ್ಕಾಂಡೆ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆಸಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಕಳೆದ ಎರಡು ದಿನಗಳ ಹಿಂದೆ ಆಗಮಿಸಿದ್ದ ಇವರು ಇಂದು ದೇವಾಲಯಕ್ಕೆ ಭೇಟಿ ನೀಡಿ ವಾಪಸ್ ತೆರಳಿದ್ದಾರೆ.