ಕಾರವಾರ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದಾನೆ. ಅಂಕೋಲಾದ ಹೊನ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಘಟನೆ ನಡೆದಿದೆ.
ಅಂಕೋಲಾ ತಾಲೂಕಿನ ಶಿರಗುಂಜಿಯ ಬೊಮ್ಮಯ್ಯ ರಾಮು ಗೌಡ (30) ಮೃತ ದುರ್ದೈವಿ. ಹಿಂಬದಿ ಸವಾರ ಮಂಜುನಾಥ ಗೌಡ (25) ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅಂಕೋಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರರಿಬ್ಬರು ಅಂಕೋಲಾದಿಂದ ಯಲ್ಲಾಪುರ ಕಡೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತೆರಳುತ್ತಿದ್ದರು. ಈ ವೇಳೆ ಹೊನ್ನಳ್ಳಿ ಬಳಿ ಲಾರಿ ಚಾಲಕ ವಾಹನವನ್ನು ಹಿಂದಕ್ಕೆ ತೆಗೆದುಕೊಳ್ಳುವಾಗ ಬೈಕ್ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.