ETV Bharat / state

ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್​ ಒತ್ತಾಯ

ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಕಾರ್ಮಿಕ, ರೈತರ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಬ್ಲಾಕ್ ಕಾಂಗ್ರೆಸ್​ ವತಿಯಿಂದ ತಹಶೀಲ್ದಾರ್​ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

author img

By

Published : Aug 20, 2020, 9:38 PM IST

congress protest against bjp in bhatkal
ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್​ ಒತ್ತಾಯ

ಭಟ್ಕಳ: ಬಿಜೆಪಿ ಸರ್ಕಾರ ವಿವಿಧ ಹಗರಣಗಳಲ್ಲಿ ಮುಳುಗಿದ್ದು, ಪ್ರಜೆಗಳಿಗೆ ಮಾರಕವಾಗಿರುವ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ ಭಟ್ಕಳ ಬ್ಲಾಕ್‍ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್​ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ರೈತ ವಿರೋಧಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿ ಮಾಡಲಾಗುತ್ತಿದೆ. ಕೂಡಲೇ ಜನವಿರೋಧಿ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಅತಿವೃಷ್ಟಿಯ ತೀವ್ರ ಹಾನಿ ಪರಿಹಾರ ಒದಗಿಸಲು ವಿಫಲವಾಗಿರುವ ಸರ್ಕಾರದ ನಿಲುವನ್ನು ಖಂಡಿಸುತ್ತೇವೆ. ಕೊರೊನಾ ನಿಯಂತ್ರಣ ಸಂದರ್ಭದಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರ ಪ್ರಕರಣವನ್ನು ಉಚ್ಚನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

ಇಲ್ಲವಾದರೇ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.