ETV Bharat / state

ಉತ್ತರ ಕನ್ನಡದಲ್ಲಿ ಮುಂದುವರೆದ ಮಳೆ: ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ - ಪ್ರವಾಹ ಸ್ಥಿತಿ

ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಎಲ್ಲೆಡೆ ಪ್ರವಾಹ ಸ್ಥಿತಿ ಎದುರಾಗಿದೆ. ಪ್ರವಾಹ ಹೆಚ್ಚಿರುವ ಹಿನ್ನೆಲೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಇನ್ನು ಪರಿಹಾರ ಕಾರ್ಯದಲ್ಲಿದ್ದವರಿಗೆ ರಜಾ ಅವಧಿಯಲ್ಲೂ ಕರ್ತವ್ಯ ನಿಭಾಯಿಸಲು ಡಿಸಿ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾರವಾರದಲ್ಲಿ ಮುಂದುವರೆದ ಮಳೆ : ನಾಳೆಯೂ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಡಿಸಿ
author img

By

Published : Aug 9, 2019, 5:08 PM IST

ಕಾರವಾರ: ಕಳೆದ ಒಂದು ವಾರದಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಎಲ್ಲೆಡೆ ಪ್ರವಾಹ ಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಒಂದು ವಾರದಿಂದ ರಜೆ ನೀಡಲಾಗಿದ್ದು, ನಾಳೆಯೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಕರಾವಳಿ ಹಾಗೂ ಮಲೆನಾಡಿನಲ್ಲಿ ನಿರಂತರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳನ್ನು ಕಳೆದುಕೊಂಡ ಜನರು ಪರಿಹಾರ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ. ಈ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರವೂ ಕೂಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಆದೇಶ ಹೊರಡಿಸಿದ್ದಾರೆ.

ಪರಿಹಾರ ಕಾರ್ಯದಲ್ಲಿದ್ದವರಿಗೆ ರಜೆ ಇಲ್ಲ:

Continuous Rain in karwar
ಕಾರವಾರದಲ್ಲಿ ಮುಂದುವರೆದ ಮಳೆ

ಜಿಲ್ಲೆಯಲ್ಲಿ ವರುಣ ಅಬ್ಬರ ಹೆಚ್ಚಾಗಿದ್ದು, ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಾಗಿದೆ. ಪರಿಹಾರ ಕಾಮಗಾರಿಯಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯ ಎಲ್ಲಾ ಅಧಿಕಾರಿಗಳೂ ಮುಂದಿನ ಮೂರು ದಿನಗಳ ರಜೆ ಅವಧಿಯಲ್ಲಿ ಕೇಂದ್ರಸ್ಥಾನ ಬಿಡದಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರವಾಹ ಹೆಚ್ಚಿರುವ ಹಿನ್ನೆಲೆಯಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ತರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಹಾನಿಯ ಪ್ರಮಾಣ ಅಂದಾಜು ಮಾಡಲಾಗುತ್ತಿದೆ. ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ನಿಯೋಜಿತ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಸಂತ್ರಸ್ತರಿಗೆ ನೆರವಾಗಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

Intro:Body:ನಾಳೆಯೂ ಶಾಲಾ ಕಾಲೇಜಿಗೆ ರಜೆ... ಪರಿಹಾರ ಕಾರ್ಯದಲ್ಲಿದ್ದವರಿಗೆ ರಜಾ ಅವಧಿಯಲ್ಲೂ ಕರ್ತವ್ಯ ನಿಭಾಯಿಸಲು ಡಿಸಿ ಸೂಚನೆ

ಕಾರವಾರ: ಕಳೆದ ಒಂದು ವಾರದಿಂದ ಬಿಡದೇ ಸುರಿಯುತ್ತಿರುವ ಮಳೆಗೆ ಎಲ್ಲೆಡೆ ಪ್ರವಾಹ ಸ್ಥಿತಿ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಶನಿವಾರವೂ‌ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ನಿರಂತರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಗಳನ್ನು ಕಳೆದುಕೊಂಡ ಜನರು ಪರಿಹಾರ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ. ಈ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರವೂ ಕೂಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶಿಸಿದ್ದಾರೆ.

ಪರಿಹಾರ ಕಾರ್ಯದಲ್ಲಿದ್ದವರಿಗೆ ರಜೆ ಇಲ್ಲ:
ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು ಪ್ರವಾಹ ಸಂತ್ರಸ್ಥರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಾಗಿದೆ. ಪರಿಹಾರ ಕಾಮಗಾರಿಯಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯ ಎಲ್ಲ ಅಧಿಕಾರಿಗಳೂ ಮುಂದಿನ ಮೂರು ದಿನಗಳ ರಜೆ ಅವಧಿಯಲ್ಲಿ ಕೇಂದ್ರಸ್ಥಾನ ಬಿಡದಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹ ಹೆಚ್ಚಿರುವ ಹಿನ್ನೆಲೆಯಲ್ಲಿ ಗಂಜೀಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ಥರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಹಾನಿಯ ಅಂದಾಜು ಮಾಡಲಾಗುತ್ತಿದೆ. ಪರಿಹಾರ ಕ್ರಮಗಳನ್ನು ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ನಿಯೋಜಿತ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಸಂತ್ರಸ್ಥರಿಗೆ ನೆರವಾಗಬೇಕು ಎಂದು ಅವರು ಸೂಚಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.