ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಭಾನುವಾರ 346 ಮಂದಿಗೆ ಸೋಂಕು ದೃಢಪಟ್ಟಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ.
ಕಾರವಾರದಲ್ಲಿ 41, ಅಂಕೋಲಾ 15, ಕುಮಟಾ 28, ಹೊನ್ನಾವರ 59, ಭಟ್ಕಳ 32, ಶಿರಸಿ 79, ಸಿದ್ದಾಪುರ 19, ಯಲ್ಲಾಪುರ 18, ಮುಂಡಗೋಡ 21, ಹಳಿಯಾಳ 33 ಹಾಗೂ ಜೋಯಿಡಾದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಸದ್ಯ 3,994 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 460 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 3,534 ಜನರು ಹೋಮ್ ಐಸೋಲೇಷನ್ನಲ್ಲಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ದಾಖಲಾದ ಕೋವಿಡ್ ಪ್ರಕರಣಗಳ ಸಂಖ್ಯೆ 47,677ಕ್ಕೆ ಏರಿಕೆಯಾಗಿದೆ.
ನಿನ್ನೆ 693 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 43,033 ಜನರು ಚೇತರಿಕೆ ಕಂಡಿದ್ದಾರೆ. 6 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 650ಕ್ಕೇರಿದೆ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣ ಬಳಿ ಸ್ಫೋಟ; 6 ಜನರಿಗೆ ಗಾಯ