ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 399 ಜನರಿಗೆ ಕೊರೊನಾ ಸೋಂಕು ಬಾಧಿಸಿದೆ.
ನಿನ್ನೆ ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 213ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 18,331 ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ 16,346 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 228 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 1,544 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲೀಗ 1,772 ಸಕ್ರಿಯ ಪ್ರಕರಣಗಳಿವೆ.
ಕೊರೊನಾ ಕರ್ಫ್ಯೂ ಜಾರಿಯಲ್ಲಿದ್ದು ಜಿಲ್ಲೆಯಾದ್ಯಂತ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಗಿದ್ದರೂ ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯಿಂದ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಹೊರ ಭಾಗಗಳಿಂದ ಬಂದವರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್ಗೆ ಒಳಗಾಗುವ ಮೂಲಕ ಸೋಂಕು ಹರಡುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕೊರೊನಾ: ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕೈ ನಾಯಕರ ವಾಗ್ದಾಳಿ