ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಮಾಜಿ ಶಾಸಕ, ವಾ.ಕ.ರ.ಸಾ. ಸಂಸ್ಥೆಯ ಅಧ್ಯಕ್ಷ ವಿ. ಎಸ್. ಪಾಟೀಲ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೆಲ ದಿನಗಳ ಹಿಂದೆ ವಿ.ಎಸ್. ಪಾಟೀಲರ ಪುತ್ರನಿಗೆ ಸೋಂಕು ತಗುಲಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಪುತ್ರನಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ವಿ.ಎಸ್.ಪಾಟೀಲರ ಗಂಟಲು ದ್ರವದ ಪರೀಕ್ಷೆ ಮಾಡಲಾಗಿತ್ತು. ಇಂದು ವರದಿಯಲ್ಲಿ ಕೋವಿಡ್ ತಗುಲಿದೆ ಎಂದು ತಹಶೀಲ್ದಾರ್ ಖಚಿತಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ಕಾರ್ಯಕ್ರಮದಲ್ಲಿ ವಿ.ಎಸ್.ಪಾಟೀಲ್ ಕೂಡ ಪಾಲ್ಗೊಂಡಿದ್ದರು. ಇದೀಗ ಹೆಬ್ಬಾರ್ ಆಪ್ತರು ಹಾಗೂ ಕಾರ್ಯಕರ್ತರಲ್ಲಿ ಆತಂಕ ಶುರುವಾಗಿದೆ. ಪಾಟೀಲ್ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರಿಗೂ ಕೂಡಾ ತಪಾಸಣೆಗೆ ಒಳಗಾಗುವಂತೆ ತಿಳಿಸಲಾಗಿದೆ.