ಮಂಗಳೂರು/ಕಾರವಾರ: ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು ಉ.ಕನ್ನಡದಲ್ಲಿ 148 ಮಂದಿಗೆ ಕೋವಿಡ್ ಸೋಂಕು ದೃಢವಾದರೆ, ದ.ಕ ಜಿಲ್ಲೆಯಲ್ಲಿ 146 ಪ್ರಕರಣಗಳು ಪತ್ತೆಯಾಗಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 148 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,218ಕ್ಕೆ ಏರಿಕೆಯಾಗಿದೆ. ಕಾರವಾರ- 28, ಅಂಕೋಲ- 14, ಕುಮಟಾ- 7, ಹೊನ್ನಾವರ- 17, ಭಟ್ಕಳ- 11, ಶಿರಸಿ- 24, ಮುಂಡಗೋಡ- 47 ಮಂದಿಗೆ ಸೋಂಕು ದೃಢಪಟ್ಟಿದೆ. ಕುಮಟಾದಲ್ಲಿ ಕೋವಿಡ್ಗೆ ಓರ್ವ ಮೃತಪಟ್ಟಿದ್ದಾನೆ. ಈವರೆಗೂ 160 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ 1,221 ಸಕ್ರಿಯ ಪ್ರಕರಣಗಳು ಇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 146 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 641 ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ 28,567ಕ್ಕೆ ಏರಿಕೆಯಾಗಿದೆ. 299 ಮಂದಿ ಗುಣಮುಖರಾಗಿದ್ದು ಈವರೆಗೆ 24,985 ಮಂದಿ ಗುಣಮುಖರಾದಂತಾಗಿದೆ. ಇನ್ನೂ 2,941 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 8,687 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು,10,00,580 ರೂ. ದಂಡ ವಸೂಲಿ ಮಾಡಲಾಗಿದೆ.