ETV Bharat / state

ಕಾರಿನಲ್ಲಿ ಬಂದು ಹಸು ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

author img

By

Published : Aug 23, 2021, 8:49 PM IST

ಈ ದೃಶ್ಯ ಸಮೀಪದ ಹೋಟೆಲೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಪೋಸ್ಟ್ ಮಾಸ್ಟರ್ ಮಂಜುನಾಥ ಯಾಜಿ ಎನ್ನುವರು ಮಂಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಗೋ ಕಳ್ಳರಿಗಾಗಿ ಬಲೆ ಬೀಸಿದ್ದಾರೆ..

cow-theft-in-honnavar-gunavante-village
ಹಸು ಕಳ್ಳತನ

ಕಾರವಾರ : ವಾಹನದಲ್ಲಿ ಬಂದ ನಾಲ್ವರು ಅಪರಿಚಿತರು ಆಕಳೊಂದನ್ನು ಕದ್ದು ಪರಾರಿಯಾಗಿರುವ ಘಟನೆ ಹೊನ್ನಾವರ ತಾಲೂಕಿನ ಗುಣವಂತೆಯಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಾರಿನಲ್ಲಿ ಬಂದು ಹಸು ಕಳ್ಳತನ

ಭಾನುವಾರ ನಸುಕಿನ ಜಾವ ಕಾರಿನಲ್ಲಿ ಬಂದ ನಾಲ್ವರು ಅಪರಿಚಿತರು, ಗುಣವಂತೆ ಗ್ರಾಮದ ಮರಿ ಭಟ್ಟರ ಹೋಟೆಲ್ ಮುಂದೆ ನಿಂತಿದ್ದ ಆಕಳನ್ನು ವಾಹನದ ಡಿಕ್ಕಿಯಲ್ಲಿ ಹಾಕಿಕೊಂಡು ಪರಾರಿಯಾಗಿದ್ದಾರೆ.

ಈ ದೃಶ್ಯ ಸಮೀಪದ ಹೋಟೆಲೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಪೋಸ್ಟ್ ಮಾಸ್ಟರ್ ಮಂಜುನಾಥ ಯಾಜಿ ಎನ್ನುವರು ಮಂಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಗೋ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.