ETV Bharat / state

ಶಿರಸಿಯಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಯತ್ನ; ಆರೋಪಿ ಬಂಧನ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಶಿರಸಿಯ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌

ಅತ್ಯಾಚಾರಿ ಆರೋಪಿ ಬಂಧನ
ಅತ್ಯಾಚಾರಿ ಆರೋಪಿ ಬಂಧನ
author img

By

Published : Jun 23, 2023, 9:36 PM IST

Updated : Jun 23, 2023, 10:16 PM IST

ಶಿರಸಿ (ಉತ್ತರ ಕನ್ನಡ) : ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಶಿರಸಿಯ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.‌ ಮೂಲತಃ ಆಂದ್ರಪ್ರದೇಶದ ರಾಯಚೂಟಿ ತಾಲೂಕಿನ ಶಿವ ರಾಮಯ್ಯ (26) ಬಂಧಿತ ಆರೋಪಿ. ಈತ ಕಳೆದ ಒಂದು ತಿಂಗಳಿನಿಂದ ಶಿರಸಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದನು.

ಈತ ಕೆಲಸ ಮಾಡುತ್ತಿದ್ದ ಸ್ಥಳದ ಸಮೀಪದಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ವೈರ್‌ನಿಂದ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಮಗು ಜೋರಾಗಿ ಅತ್ತು ಗೋಗರೆದ ಶಬ್ದ ಕೇಳಿ ಅಕ್ಕಪಕ್ಕದ ಜನರು ಓಡಿ ಬಂದಿದ್ದರು. ಆರೋಪಿ ಪರಾರಿಯಾಗಿದ್ದ. ಹೀಗೆ ತಪ್ಪಿಸಿಕೊಂಡು ಪರಾರಿ ಯಾಗುತ್ತಿದ್ದವನನ್ನು ಸಾರ್ವಜನಿಕರ ಸಹಕಾರದಲ್ಲಿ ಮಾರುಕಟ್ಟೆ ಠಾಣೆಯ ಪಿಎಸ್ಐ ಭೀಮಾಶಂಕರ್ ಹಾಗೂ ಸಿಬ್ಬಂದಿ ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.‌ ತನಿಖಾಧಿಕಾರಿ ಸಿಪಿಐ ರಾಮಚಂದ್ರ ನಾಯಕ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಚಾಕೊಲೇಟ್ ಕೊಡುವುದಾಗಿ ಹೇಳಿ ಅತ್ಯಾಚಾರ : ಇದೇ ತಿಂಗಳ ಜೂನ್ 19 ರಂದು ರಾಯಚೂರು ಜಿಲ್ಲೆಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಅತ್ಯಾಚಾರ ನಡೆಸಲಾಗಿತ್ತು. ಸಪನ್ ಮಂಡಲ್ ಎಂಬಾತ ಬಂಧಿತ ಆರೋಪಿ. ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ತನ್ನ ಸ್ಕೂಟಿಯಲ್ಲಿ ಕರೆದುಕೊಂಡು ಹೋದ ಆರೋಪಿ.

ಬಳಿಕ ಚಾಕೊಲೇಟ್​​ ಕೊಡಿಸದೇ ಸ್ಕೂಟಿ ಕಲಿಸುತ್ತೇನೆ ಎಂದು ನಿರ್ಜನ ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಕೃತ್ಯದ ಬಳಿಕ ಆರೋಪಿಯು ಬಾಲಕಿಯನ್ನು ಮನೆಯಿಂದ ತುಸು ದೂರ ಬಿಟ್ಟು ಪರಾರಿಯಾಗಿದ್ದನು. ಈ ವೇಳೆ ಬಾಲಕಿ ಆಳುತ್ತ ಮನೆಗೆ ಬರುತ್ತಿರುವುದನ್ನು ಕಂಡ ಪೋಷಕರು ಗಾಬರಿಗೊಂಡು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ : ಅಪ್ರಾಪ್ತ ಮಲಮಗಳನ್ನೇ ಅತ್ಯಾಚಾರ ಮಾಡಿದ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್​

ಸಂತ್ರಸ್ತೆ ಬಾಲಕಿಯ ಪೋಷಕರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಕೃತ್ಯವೆಸಗಿ ಸಿಂಧನೂರು ನಗರದಲ್ಲಿ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ಕೆ. ಎಚ್. ಮಣಿಕಂಠ ನೇತೃತ್ವದ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಬಳಿಕ ವಿಚಾರಣೆ ವೇಳೆ ಆರೋಪಿಯು ಅತ್ಯಾಚಾರ ಎಸಗಿರುವ ಬಗ್ಗೆ ಒಪ್ಪಿಕೊಂಡಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ : ತಂದೆ ಸಾವು, ತಾಯಿ ಅನಾರೋಗ್ಯ, 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ.. ಬಿಆರ್​ಎಸ್​ ಪಾರ್ಟಿಯಿಂದ ಅಣ್ತಮ್ಮ ಅಮಾನತು

Last Updated : Jun 23, 2023, 10:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.