ETV Bharat / state

ದಾಂಡೇಲಿಯಲ್ಲಿ ಮೀನು ಹಿಡಿಯುತ್ತಿದ್ದ ಬಾಲಕನ ಎಳೆದೊಯ್ದ ಮೊಸಳೆ

ದಾಂಡೇಲಿ ನಗರದ ಹಳಿಯಾಳ ರಸ್ತೆಯ ವಿನಾಯಕ ನಗರದಲ್ಲಿರುವ ಕಾಳಿ ನದಿಯ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನೋರ್ವನನ್ನು ಮೊಸಳೆಯೊಂದು ಎಳೆದೊಯ್ದಿದೆ.

crocodile-drags-15-year-old-boy-into-kali-river
ದಾಂಡೇಲಿಯಲ್ಲಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ
author img

By

Published : Oct 25, 2021, 8:07 AM IST

Updated : Oct 25, 2021, 2:29 PM IST

ಕಾರವಾರ (ಉತ್ತರಕನ್ನಡ): ಮೀನು ಹಿಡಿಯುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದೊಯ್ದು ಘಟನೆ ದಾಂಡೇಲಿ ನಗರದ ಹಳಿಯಾಳ ರಸ್ತೆಯ ವಿನಾಯಕ ನಗರದಲ್ಲಿರುವ ಕಾಳಿ ನದಿಯ ದಂಡೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದ್ದು, ಈವರೆಗೂ ಬಾಲಕನ ಸುಳಿವು ಪತ್ತೆಯಾಗಿಲ್ಲ.‌

ನಗರದ ಹಳಿಯಾಳ ರಸ್ತೆಯ ಅಲೈಡ್ ಪ್ರದೇಶದ ನಿವಾಸಿಯಾಗಿರುವ 15 ವರ್ಷದ ಬಾಲಕ ಮೊಹಿನ್ ಮೆಹಮೂದ್ ಅಲಿ ಮಿಯಾ ಗುಲ್ಬರ್ಗ ಎಂಬಾತನನ್ನು ಮೊಸಳೆ ಎಳೆದೊಯ್ದಿದೆ. ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ, ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸ್ಥಳೀಯರು ಎರಡ್ಮೂರು ತೆಪ್ಪದ ಮೂಲಕ ಬಾಲಕನ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇತ್ತ ಜಂಗಲ್ ಲಾಡ್ಜಸ್ ಹಾಗೂ ಗಣೇಶಗುಡಿ ರ‍್ಯಾಪ್ಟಿಂಗ್​​ನವರಿಗೆ ಮಾಹಿತಿ ನೀಡಿ, ಸ್ಥಳಕ್ಕೆ ರ‍್ಯಾಪ್ಟ್ ತರಿಸಿ ಅವರಿಂದಲೂ ತಡರಾತ್ರಿವರೆಗೂ ಪತ್ತೆ ಕಾರ್ಯಾಚರಣೆ ನಡೆಸಿದರು ಬಾಲಕನ ಸುಳಿವು ಪತ್ತೆಯಾಗಿಲ್ಲ.

ದಾಂಡೇಲಿಯಲ್ಲಿ ಮೀನು ಹಿಡಿಯುತ್ತಿದ್ದ ಬಾಲಕನ ಎಳೆದೊಯ್ದ ಮೊಸಳೆ

ಸೂಪಾ ಅಣೆಕಟ್ಟಿನಿಂದ ನೀರು ಬಿಡುವುದನ್ನು ಸ್ಥಗಿತಗೊಳಿಸುವಂತೆ ಗಣೇಶಗುಡಿ ಕೆಪಿಸಿಯವರಿಗೆ ಮಾಹಿತಿ ನೀಡಲಾಗಿದೆ. ಸಂಜೆ ನಾಲ್ಕುವರೆ ಗಂಟೆ ಸುಮಾರಿಗೆ ಎರಡು ಸಲ ಬಾಲಕನನ್ನು ಮೇಲಕ್ಕೆತ್ತಿ ನೀರಿನ ಕೆಳಗಡೆ ಮೊಸಳೆ ಹೋಗಿರುವುದು ಕಂಡು ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆದರೆ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಇಂದು ಮತ್ತೆ ಶೋಧ ನಡೆಸಲಾಗುತ್ತಿದೆ.

ನಗರದಲ್ಲಿ ಮೊದಲ ಪ್ರಕರಣ:

ಮೊಸಳೆ ಬಾಲಕನನ್ನು ಎಳೆದುಕೊಂಡು ಹೋಗಿರುವುದು ನಗರದಲ್ಲಿ ಇದು ಮೊದಲ ಪ್ರಕರಣವಾಗಿ ದಾಖಲಾಗಿದೆ. ಮಾಹಿತಿಯ ಪ್ರಕಾರ ಮೊಸಳೆ ಈವರೆಗೆ ನರಬಲಿಯನ್ನು ಪಡೆದುಕೊಂಡಿರಲಿಲ್ಲ. ಮೊಸಳೆ ಜೀವಂತವಾಗಿ ಯಾವುದನ್ನು ತಿನ್ನುವುದಿಲ್ಲ, ಕೊಳೆತ ಬಳಿಕ ತಿನ್ನುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬಂದಿವೆ. ಹೀಗಾಗಿ ಬಾಲಕನನ್ನು ಅವಿತಿಟ್ಟರಬಹುದೆಂದು ಶಂಕಿಸಲಾಗಿದೆ.

ಇದನ್ನೂ ಓದಿ: 'ಕಾನೂನು ಕ್ರಮದಿಂದ ನನ್ನನ್ನು ರಕ್ಷಿಸಿ': ಮುಂಬೈ ಪೊಲೀಸ್ ಕಮಿಷನರ್​ಗೆ ವಾಂಖೆಡೆ ಪತ್ರ

Last Updated : Oct 25, 2021, 2:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.