ETV Bharat / state

ಸೋನಾರಕೇರಿಯ ವಿದ್ಯಾರ್ಥಿಗಳಿಗೆ ಸೈಕಲ್​ ವಿತರಣೆ..

ಪೋಷಕರು ಸಂಸ್ಕೃತಿ ಹಾಗೂ ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸುನೀಲ್​ ನಾಯ್ಕ ಹೇಳಿದರು.

ಸೋನಾರಕೇರಿಯ ವಿದ್ಯಾರ್ಥಿಗಳಿಗೆ ಸೈಕಲ್​ ವಿತರಣೆ
author img

By

Published : Sep 20, 2019, 7:45 AM IST

ಭಟ್ಕಳ: ಸೋನಾರಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸುನೀಲ್​ ನಾಯ್ಕ, ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಂಸ್ಕೃತಿ ಹಾಗೂ ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸೈಕಲ್​ ವಿತರಣೆ

ಸೈಕಲ್​ ವಿತರಣೆಗೂ ಮೊದಲು ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣಕ್ಕೆ 15 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಭಟ್ಕಳ: ಸೋನಾರಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸುನೀಲ್​ ನಾಯ್ಕ, ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಂಸ್ಕೃತಿ ಹಾಗೂ ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸೈಕಲ್​ ವಿತರಣೆ

ಸೈಕಲ್​ ವಿತರಣೆಗೂ ಮೊದಲು ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣಕ್ಕೆ 15 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

Intro:ಭಟ್ಕಳ:ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದ ನಡೆಯಿತುBody:ಭಟ್ಕಳ:ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸುನೀಲ ನಾಯ್ಕ ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ನೀಡುತ್ತಿರುವ ಉದ್ದೇಶ ಯಾಕೆಂದು ವಿದ್ಯಾರ್ಥಿಗಳು ಮೊದಲು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣದ ಮಟ್ಟ ಹೆಚ್ಚಿಸಲು ಮತ್ತು ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಬೇಕೆಂಬ ಉದ್ದೇಶದಿಂದ ಸರಿಯಾದ ಸಮಯಕ್ಕೆ ಶಾಲೆಗೆ ಹೋಗಿ ತಲುಪಿಕೊಂಡು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿಕೊಂಡು ಬರುತ್ತಿದ್ದೆ. ಅದರ ಸರಿಯಾದ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಸರ್ಕಾರ ನಿಮಗೆ ಉಚಿತವಾಗಿ ಸೈಕಲ್ ನೀಡುತ್ತಿದೆ ಎಂದು ತಿಳಿದುಕೊಳ್ಳ ಬೇಡಿ, ಅದು ನಿಮ್ಮ ಹಣ ಸಾರ್ವಜನಿಕರ ಹಣ ನಿಮ್ಮ ಹಣದಲ್ಲಿಯೇ ನಿಮಗೆ ಸೈಕಲ್ ನೀಡುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ಉಚಿತ ಸೈಕಲ್ ವಿತರಣೆಯಾದ ನಂತರ ಅದು ಹೆಚ್ಚಾಗಿ ದುರುಪಯೋಗವಾಗುತ್ತಿದೆ ವಿದ್ಯಾರ್ಥಿಗಳ ಹತ್ತಿರ ಇರದೇ ಬೇರೆ ವ್ಯಕ್ತಿಗಳು ಅದರ ಉಪಯೋಗ ಪಡೆಯುತ್ತಿರುತ್ತಾರೆ ಎಂದು ಹೇಳಿದರು

ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಪಂಚಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆಗೆ ಬರುವ ಉದ್ದೇಶಕ್ಕಾಗಿ ನೀಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಇದರ ದುರುಪಯೋಗ ಪಡೆದುಕೊಳ್ಳದೆ ಶಾಲೆಗಳಿಗೆ ಮಾತ್ರ ಸೈಕಲ್ ತೆಗೆದುಕೊಂಡು ಹೋಗುವಂತೆ ಪಾಲಕರು ಸರಿಯಾಗಿ ಗಮನವಹಿಸಬೇಕು ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕೂಡ ಮಕ್ಕಳು ಶಾಲೆಯಿಂದ ಮನೆಗೆ ಬಂದ ಮೇಲೆ ಅವರ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕೆಂದು ಹೇಳಿದರು

ನಂತರ ಬಸ್ ಪಾಸ್ ಮತ್ತು ಹಾಸ್ಟೆಲ್ ನಲ್ಲಿ ಇರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬಾಲಕರಿಗೆ 20 ಹಾಗೂ ಬಾಲಕಿಯರಿಗೆ 26 ಸೈಕಲಗಳನ್ನು ವಿದ್ಯಾರ್ಥಿಗಳ ಪಾಲಕ ಸಮ್ಮುಖದಲ್ಲಿ ಶಾಸಕರು ವಿತರಿಸಿದರು

ಇದಕ್ಕೂ ಪೂರ್ವದಲ್ಲಿ ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣ ಶೀರ್ಷಿಕೆಯಡಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು Conclusion:ಉದಯ ನಾಯ್ಕ.ಭಟ್ಕಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.