ಕಾರವಾರ: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟುಗಳು ಕಾರವಾರದ ಸುರಕ್ಷಿತ ಪ್ರದೇಶಗಳಲ್ಲಿ ಆಶ್ರಯ ಪಡೆದುಕೊಂಡಿವೆ.
ರಾಜ್ಯದ ಸರ್ವಋತು ಬಂದರು ಖ್ಯಾತಿಯ ಕಾರವಾರದ ಬೈತಖೋಲ್ ಬಂದರು ಪ್ರದೇಶದಲ್ಲಿ ವಿವಿಧ ಭಾಗದ ನೂರಕ್ಕೂ ಅಧಿಕ ಬೋಟುಗಳು ಲಂಗರು ಹಾಕಿ ನಿಂತಿವೆ. ಆಳಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ವೇಗವಾಗಿ ಗಾಳಿ ಬೀಸುತ್ತಿದ್ದು, ಮೀನುಗಾರಿಕೆ ನಡೆಸಲು ಅಪಾಯಕಾರಿ ಆಗಿದೆ. ಈ ನಿಟ್ಟಿನಲ್ಲಿ ಮೀನುಗಾರಿಕಾ ಇಲಾಖೆ ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆ ಜಿಲ್ಲೆ, ಹೊರಜಿಲ್ಲೆ ಸೇರಿದಂತೆ ಹೊರ ರಾಜ್ಯದ ಆಳ ಸಮುದ್ರ ಮೀನುಗಾರಿಕಾ ಬೋಟುಗಳು ದಡದತ್ತ ವಾಪಸ್ ಆಗುತ್ತಿವೆ.
ಜಿಲ್ಲೆಯ ಕರಾವಳಿಯಲ್ಲಿ ಇನ್ನೆರಡು ದಿನ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದ್ದು, ತೀರ ಪ್ರದೇಶದ ನಿವಾಸಿಗಳಿಗೂ ಸಹ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ನಾಣ್ಯ, ಅಂಚೆ ಚೀಟಿ ಸಂಗ್ರಹಿಸುವ ಕೃಷಿಕನ ಹವ್ಯಾಸ: ಗಮನ ಸೆಳೆದ ಚೋಳರ, ಗಂಗರ ಗತಕಾಲದ ನಾಣ್ಯಗಳು!