ಶಿರಸಿ: ಕೆನರಾ ಡಿಸಿಸಿ ಬ್ಯಾಂಕಿನ ಚುನಾವಣೆಗೆ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ಅವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಹಳಿಯಾಳ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮತ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿಯ ಕೆಡಿಸಿಸಿ ಬ್ಯಾಂಕ್ ಚುನಾವಣೆ ಹಿಂದಿನ ಅವಧಿಯಂತಿಲ್ಲ. ಪ್ರಸಕ್ತ ಸಾಲಿನ ಅಖಾಡ ಭಾರಿ ತುರುಸಿನಿಂದ ಕೂಡಿದೆ. ಯಾರೇ ನಿರ್ದೇಶಕರಾಗಿ ಆಯ್ಕೆಯಾಗಿ ಬಂದರೂ ಬ್ಯಾಂಕಿನ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು. ಆಡಳಿತ ಮಂಡಳಿಯಲ್ಲಿ ರಾಜಕೀಯ ತರಬಾರದು. ರೈತರ ಕಾಮಧೇನುವಾದ ಬ್ಯಾಂಕಿನಿಂದ ಕೃಷಿಕರಿಗೆ ಸಕಾಲಕ್ಕೆ ಸಾಲ ನೀಡುವುದರ ಜೊತೆಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.
ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಎಂಎಲ್ಸಿ ಎಸ್.ಎಲ್.ಘೋಟ್ನೇಕರ್
ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿದಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಅವರು ನಾಮಪತ್ರ ಸಲ್ಲಿಸಿದರು.