ಕಾರವಾರ: ಡೆತ್ನೋಟ್ನಲ್ಲಿ ಪೊಲೀಸರ ಹೆಸರು ನಮೂದಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್, ಪಿಎಸ್ಐ ಹಾಗೂ ಓರ್ವ ಪೊಲೀಸ್ ಕಾನ್ಸ್ಟೇಬಲ್ನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕಾರವಾರ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಕುಸುಮಾಧರ್, ಪಿಎಸ್ಐ ಶಾಂತಿನಾಥ, ಕಾನ್‌ಸ್ಟೇಬಲ್ ದೇವರಾಜ ಅಮಾನತುಗೊಂಡವರಾಗಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ನಿವಾಸಿ ಮಾರುತಿ ನಾಯ್ಕ ಇತ್ತೀಚೆಗೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಡೆತ್ನೋಟ್ ಎರಡನೇ ದಿನ ಲಭ್ಯವಾದ ಕಾರಣ ಪೊಲೀಸರು ಅನುಮಾನ ವ್ಯಕ್ತಪಡಿಸಿ ಡೆತ್ನೋಟ್ ಅನ್ನು ಎಫ್ಎಸ್ಎಲ್ಗೆ ಕಳುಹಿಸಿದ್ದರು. ಆದರೆ, ಇದೀಗ ವಿಡಿಯೋ ಕೂಡ ಲಭ್ಯವಾದ ಕಾರಣ ಐಜಿ ಚಂದ್ರಗುಪ್ತ ಅವರ ಸೂಚನೆಯಂತೆ ಎಸ್ಪಿ ವಿಷ್ಣುವರ್ಧನ್ ಇಲಾಖಾ ತನಿಖೆ ಮುಕ್ತಾಯದವರೆಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ದಲಿತ ಮುಖಂಡ ಎಲಿಷಾ ಎಲಕಪಾಟಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದನ್ನು ಮಾರುತಿ ನಾಯ್ಕ ವಿಡಿಯೋ ಮಾಡಿ ಬಳಿಕ ದೂರು ನೀಡಿದ್ದರು. ಆದರೆ, ಪ್ರಕರಣ ತನಿಖೆ ನೆಪದಲ್ಲಿ ಪೊಲೀಸರು ಕಿರುಕುಳ ನೀಡಿದ್ದಾಗಿ ಮಾರುತಿ ಡೆತ್ನೋಟ್ ಹಾಗೂ ವಿಡಿಯೋ ಮೂಲಕ ಆರೋಪಿಸಿದ್ದರು. ಕುಟುಂಬಸ್ಥರು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ತೀವ್ರವಾಗಿ ಆಗ್ರಹಿಸಿದ ಬಳಿಕ ಎಲಿಷಾ ಎಲಕಪಾಟಿ ಸೇರಿದಂತೆ ಮೂವರನ್ನು ಬಂಧಿಸಿದ್ದರು.
ಓದಿ: ಮಾರ್ಗದರ್ಶಿ ಚಿಟ್‌ಫಂಡ್ ಶಾಖೆಗಳಿಗೆ ನೀಡಿದ್ದ ಆಂಧ್ರ ಪೊಲೀಸರ ಎಲ್ಲ ನೋಟಿಸ್‌ಗಳನ್ನು ಅಮಾನತುಗೊಳಿಸಿದ ಹೈಕೋರ್ಟ್
ಆನ್ಲೈನ್ ಗೇಮ್ಸ್ನಲ್ಲಿ ಒಂದೂವರೆ ಕೋಟಿ ಗೆದ್ದಿದ್ದ ಪಿಎಸ್ಐ ಅಮಾನತು(ಪುಣೆ): ಇತ್ತೀಚೆಗೆ ಆನ್ಲೈನ್ ಗೇಮಿಂಗ್ ಆ್ಯಪ್ನಲ್ಲಿ ಒಂದೂವರೆ ಕೋಟಿ ರೂಪಾಯಿ ಬಹುಮಾನ ಗೆದ್ದು ಸುದ್ದಿಯಾಗಿದ್ದ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ಸೋಮನಾಥ್ ಝೆಂಡೆ ತಲೆದಂಡವಾಗಿತ್ತು. ಅಶಿಸ್ತಿನ ವರ್ತನೆ ಹಾಗೂ ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಕಳಂಕ ತಂದ ಆರೋಪದಡಿ ಸಬ್ ಇನ್ಸ್ಪೆಕ್ಟರ್ ಆಗಿದ್ದ ಸೋಮನಾಥ್ ಅವರನ್ನು ಅಮಾನತುಗೊಳಿಸಿ ಮಹಾರಾಷ್ಟ್ರ ಪೊಲೀಸ್ ಇಲಾಖೆ ಆದೇಶಿಸಿತ್ತು.
ಪುಣೆಯ ಪಿಂಪ್ರಿ ಚಿಂಚ್ವಾಡ ನಗರದ ಪೊಲೀಸ್ ಮುಖ್ಯ ಕಚೇರಿಯಲ್ಲಿ ಪಿಎಸ್ಐ ಸೋಮನಾಥ್ ಝೆಂಡೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಆನ್ಲೈನ್ ಕ್ರಿಕೆಟ್ ಗೇಮ್ನಲ್ಲಿ 1.5 ಕೋಟಿ ರೂ. ಬಹುಮಾನ ಗೆಲ್ಲುವ ಮೂಲಕ ಸಾಕಷ್ಟು ಸುದ್ದಿಯಾಗಿದ್ದರು. ಇದರ ಬೆನ್ನಲ್ಲೇ ಅವರು ವಿವಾದದ ಸುಳಿಗೂ ಸಿಲುಕಿದ್ದರು. ಇದರಿಂದ ಪೊಲೀಸ್ ಇಲಾಖೆಯು ತನಿಖೆಗೆ ಒಳಪಡಿಸಲಾಗಿತ್ತು. ಇದೀಗ ಈ ತನಿಖಾ ವರದಿ ಬಂದಿದ್ದು, ಇದರ ಆಧಾರದ ಮೇಲೆ ಸೋಮನಾಥ್ ಝೆಂಡೆ ಅವರನ್ನು ಅಮಾನತುಗೊಳಿಸಲಾಗಿದೆ.