ಶಿರಸಿ: ಈಜಲು ಹೋದ ಯುವಕನೊರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮುಂಡಗೋಡ ತಾಲೂಕಿನ ಕಾತೂರ ಗ್ರಾಮದಲ್ಲಿ ನಡೆದಿದೆ.
ಕಾತೂರಿನ ಮಂಜುನಾಥ್ ಕಮ್ಮಾರ (19) ಮೃತ ದುರ್ದೈವಿ. ಈತ ಕಾತೂರು ಬಳಿಯ ಮರಗಡಿ ಕೆರೆಯಲ್ಲಿ ಸ್ನಾನಕ್ಕೆ ತೆರಳಿದಾಗ ಆಕಸ್ಮಿಕವಾಗಿ ಮುಳುಗಿ ಅಸುನೀಗಿದ್ದಾನೆ.
ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಹೊರತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.