ಶಿರಸಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯುವಕ ಸಾವಿಗೀಡಾದ ಘಟನೆ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ನಡೆದಿದೆ.
ಮುಂಡಗೋಡಿನ ಕಿಲ್ಲೆ ಓಣಿಯ ಹಜರತಲಿ ಹಸನಮಿಯಾ ಆಡೂರ (25) ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿ. ಟಿಬೇಟಿಯನ್ ಕಾಲೋನಿ 3 ರ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶಾಕ್ ಹೊಡೆದಿದೆ.
ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.