ಕಾರವಾರ (ಉತ್ತರ ಕನ್ನಡ): ಸೀಬರ್ಡ್ ನೌಕಾನೆಲೆಯ ಎರಡನೇ ಹಂತದ ಕಾಮಗಾರಿ ಪ್ರಗತಿ ಪರಿಶೀಲನೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು ಕಾರವಾರದ ಕದಂಬ ನೌಕಾನೆಲೆಗೆ ಭೇಟಿ ನೀಡಿದ್ದಾರೆ.
ಗೋವಾದಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು ನೌಕಾನೆಲೆ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಜೊತೆ ಸೇರಿ ಐಎನ್ಎಸ್ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಸೀಬರ್ಡ್ ಎರಡನೇ ಹಂತದ ಯೋಜನೆ ಪ್ರಗತಿಯ ವೈಮಾನಿಕ ಸಮೀಕ್ಷೆ ನಡೆಸಿದರು.
ಈ ವೇಳೆ, ವೆಸ್ಟರ್ನ್ ನೇವಲ್ ಕಮಾಂಡ್ ಫ್ಲಾಗ್ ಆಫೀಸರ್ ಕಮಾಂಡಿಂಗ್ ವೈಸ್ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ಕರ್ನಾಟಕ ನೌಕಾ ಪ್ರದೇಶದ ಧ್ವಜ ಅಧಿಕಾರಿ ರಿಯಲ್ ಅಡ್ಮಿರಲ್ ಮಹೇಶ್ ಸಿಂಗ್ ಸ್ವಾಗತಿಸಿದರು.
ಭೇಟಿ ವೇಳೆ ನೌಕಾನೆಲೆ ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು. ನೌಕಾನೆಲೆ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವರು ಚರ್ಚೆ ನಡೆಸುತ್ತಿದ್ದು, ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.