ETV Bharat / state

ಕಂದಾಯ ಭೂಮಿ ಕಬಳಿಸಲು ಯತ್ನ: ತನಿಖೆಗೆ ಆದೇಶಿಸಿದ ಕಾರವಾರ ಜಿಲ್ಲಾಧಿಕಾರಿ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಖಂಡಗಾರ ಗ್ರಾಮದ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರದೇಶದಲ್ಲಿದ್ದ ಬೀಟೆ, ತೇಗ, ಸಾಗುವಾನಿಯಂತಹ ಮರಗಳನ್ನು ಭೂಗಳ್ಳರು ಕಡಿದಿರುವ ಕುರಿತು ವರದಿ ಪ್ರಕಟವಾಗಿತ್ತು. ಇದೀಗ ಪ್ರಕರಣ ಸಂಬಂಧ ಡಿಸಿ ತನಿಖೆಗೆ ಆದೇಶಿಸಿದ್ದಾರೆ.

Deputy commissioner orders to investigate the matter of land acquisition
ಕಂದಾಯ ಭೂಮಿ ಕಬಳಿಕೆಗೆ ಯತ್ನ ಪ್ರಕರಣ
author img

By

Published : Oct 8, 2021, 9:05 AM IST

ಕಾರವಾರ (ಉ.ಕ): ಕುಮಟಾ ತಾಲೂಕಿನ ನಾಗೂರು ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಗಿಡ ಮರಗಳನ್ನು ಕಡಿದು ಕಂದಾಯ ಭೂಮಿ ಅತಿಕ್ರಮಣಕ್ಕೆ ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಟಾ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿರುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಕುಮಟಾದ ಮಿರ್ಜಾನ್ ಪಂಚಾಯಿತಿಯ ನಾಗೂರು ಹಾಗೂ ಖಂಡಗಾರ ವ್ಯಾಪ್ತಿಯಲ್ಲಿರುವ ಕಂದಾಯ ಭೂಮಿ ಮೇಲೆ ಭೂಗಳ್ಳರು ಕಣ್ಣಿಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಮಾತ್ರವಲ್ಲದೆ, ಸುಮಾರು 50 ಎಕರೆ ಪ್ರದೇಶದಲ್ಲಿ ಗಿಡ ಮರಗಳನ್ನು ಕಡಿದು ಕಬಳಿಕೆಗೂ ಮುಂದಾಗಿದ್ದರ ಬಗ್ಗೆ ‘ಈಟಿವಿ ಭಾರತ‘ದಲ್ಲಿ ‘ಕಂದಾಯ ಭೂಮಿ ಮೇಲೆ ಭೂಗಳ್ಳರ ಕಣ್ಣು; ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ’ ಎಂಬ ತಲೆಬರಹದಡಿ ವಿಸ್ತ್ರತ ವರದಿ ಪ್ರಕಟವಾಗಿತ್ತು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿಕೆ

ಈ ವರದಿ ಪ್ರಕಟವಾದ ಬೆನ್ನಲ್ಲೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕುಮಟಾ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದಾರೆ. ಕಂದಾಯ ಹಾಗೂ ಅರಣ್ಯ ಇಲಾಖೆ ಭೂಮಿ ಅತಿಕ್ರಮಣಕ್ಕೆ ಮುಂದಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಲಾಗಿದೆ. ಸಂಪೂರ್ಣ ತನಿಖೆಯಾದ ಬಳಿಕ ಅತಿಕ್ರಮಣ ನಡೆದಿದ್ದರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಒಂದೊಮ್ಮೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರೇ ಅವರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಂದಾಯ ಜಮೀನಿನ ಮೇಲೆ ಭೂಗಳ್ಳರ ಕಣ್ಣು: ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.