ಕಾರವಾರ: ಕೊರೊನಾ ವೈರಸ್ ಸೋಂಕು ಕಾರಣ ಉತ್ತರಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಮಾರ್ಚ್ 25ರವರೆಗೆ ಆಗಮಿಸದಂತೆ ಉತ್ತರಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ.
ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶಿ-ವಿದೇಶಿ ಪ್ರವಾಸಿಗರನ್ನು ಸೆಳೆಯುವ ಉತ್ತರಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸದ್ಯ ಆಗಮಿಸದೆ ಪ್ರವಾಸ ಮುಂದೂಡುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಮನವಿ ಮಾಡಿದೆ.
ಜಿಲ್ಲೆಯಲ್ಲಿ ಪ್ರತಿ ವರ್ಷ ಈ ಸಮಯದಲ್ಲಿ ಕಾರವಾರ, ಗೋಕರ್ಣ, ಮುರುಡೇಶ್ವರ, ದಾಂಡೇಲಿ ಪ್ರವಾಸಿ ತಾಣಗಳು ತುಂಬಿರುತ್ತವೆ. ಆದರೆ ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಈಗಾಗಲೇ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆಯಾದರೂ, ಪ್ರವಾಸಕ್ಕಾಗಿ ಪ್ಲಾನ್ ಮಾಡಿದವರು ತಮ್ಮ ಬರುವಿಕೆಯನ್ನು ಮುಂದೂಡುವ ಮೂಲಕ ಸಹಕರಿಸುವಂತೆ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ತಿಳಿಸಿದೆ.