ಕಾರವಾರ: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ದಿಢೀರ್ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ.
ವಾರ್ತಾ ಇಲಾಖೆಯಿಂದ ಆಯೋಜಿಸಿದ್ದ ವಾರ್ತಾ ಸ್ಪಂದನ ಎಂಬ ಆರೋಗ್ಯ ಇಲಾಖೆಯೊಂದಿಗಿನ ನೇರ ಫೋನ್ ಇನ್ ಕಾರ್ಯಕ್ರಮದ ಉದ್ಘಾಟನೆಗೆ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಕುಳಿತಿದ್ದಾಗಲೇ ಅವರು ಪ್ರಜ್ಞೆ ತಪ್ಪಿ ಕುರ್ಚಿ ಮೇಲೆ ಒರಗಿದ್ದಾರೆ.
ತಕ್ಷಣವೇ ಸ್ಥಳದಲ್ಲಿದಲ್ಲೇ ಇದ್ದ ವೈದ್ಯರು ಚಿಕಿತ್ಸೆ ನೀಡಿದ ಹಿನ್ನೆಲೆ ಸುಧಾರಿಸಿಕೊಂಡ ಜಿಲ್ಲಾಧಿಕಾರಿ, ಕಾರ್ಯಕ್ರಮ ಉದ್ಘಾಟಿಸಿದ್ದರು. ಬಳಿಕ ಜಿಲ್ಲಾಧಿಕಾರಿ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ ಎನ್ನಲಾಗ್ತಿದೆ.